ಬೆಂಗಳೂರು (ಸೆ.22): ಕಾವೇರಿ ನೀರು ಬಿಡುಗಡೆ ವಿಚಾರ ರಾಜ್ಯದಲ್ಲಿ ತೀವ್ರ ಬಿರುಸಿನ ಸಂಚಲನಕ್ಕೆ ಕಾರಣವಾಗಿದೆ.
ಬಿಜೆಪಿ ನಾಯಕರ ಜೊತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಚರ್ಚೆ ನಡೆಸಿದ್ದು, ದೂರವಾಣಿ ಮೂಲಕ ಕಾವೇರಿ ನದಿ ವಿಚಾರದಲ್ಲಿ ಎಲ್ಲರೂ ಒಂದಾಗುವಂತೆ ಕರೆ ನೀಡಿದ್ದಾರೆ.
ಅಲ್ಲದೇ ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಹಾಗೂ ವಿಪಕ್ಷ ನಾಯಕ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಜೊತೆ ದೇವೇಗೌಡರು ದೂರವಾಣಿಯಲ್ಲಿ ಮಾತುಕತೆ ನಡಸಿದ್ದಾರೆ.
ನೆಲ, ಜಲ, ಭಾಷೆ ವಿಚಾರದಲ್ಲಿ ಒಗ್ಗಟ್ಟಾಗಿರುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡ ಮನವಿ ಮಾಡಿದ್ದಾರೆ.
