* ಚಿಕ್ಕಬಳ್ಳಾಪುರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಭೇಟಿ* ಎಸ್'ಜೆಸಿಐಟಿ ಕಾಲೇಜು ಆವರಣದಲ್ಲಿ ಹೆಲಿಪ್ಯಾಡ್'ನಲ್ಲಿ ಇಳಿದ ದೇವೇಗೌಡರು* ದೇವೇಗೌಡರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೇ ಓಡಿ ಬಂದ ನಾಯಿ* ನಾಯಿ ಓಡಿಸಲು ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಚಿಕ್ಕಬಳ್ಳಾಪುರ(ಅ. 01): ಮಾಜಿ ಪ್ರಧಾನಿ ದೇವೇಗೌಡರ ಹೆಲಿಪ್ಯಾಡ್'ಗೆ ನಾಯಿ ಅಡ್ಡಿಬಂದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಎಸ್'ಜೆಸಿಐಟಿ ಕಾಲೇಜು ಆವರಣದಲ್ಲಿ ಹೆಲಿಪ್ಯಾಡ್ ಲ್ಯಾಂಡ್ ಆಗುತ್ತಿದ್ದಂತೆ ಅಲ್ಲೇ ಪಕ್ಕದಲ್ಲಿದ್ದ ನಾಯಿಯೊಂದು ಅಡ್ಡ ಬಂದಿದೆ. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ನಾಯಿಯನ್ನು ಓಡಿಸಲು ಹರಸಾಹಸ ಪಟ್ಟರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ವೇಳೆ, ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು, ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವನ್ನು ಉಳಿಸಬೇಕೆಂದು ಜನರೇ ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಬಿಜೆಪಿ ಪಕ್ಷಗಳ ನಡುವೆ ನಮ್ಮ ಪಕ್ಷ ಹೇಗೆ ಮುನ್ನಡೆಯುತ್ತೆ ಎಂಬುದು ಸದ್ಯದಲ್ಲೆ ರಾಜ್ಯದ ಜನತೆಗೆ ಗೊತ್ತಾಗಲಿದೆ ಎಂದರು. ಇನ್ನು, ಪಕ್ಷದ ಕಾರ್ಯಕರ್ತರ ಮದುವೆ ಸಮಾರಂಭಕ್ಕೆ ಬಂದಿದ್ದ ದೇವೇಗೌಡರು ವಾಪಸ್ಸು ಹೆಲಿಪ್ಯಾಡ್ ಮೂಲಕ ಶ್ರವಣಬೆಳಗೊಳಕ್ಕೆ ಹೋದರು.