ನವದೆಹಲಿಯ ಸಂಸತ್ ಭವನದ ಪ್ರಧಾನ ಕಚೇರಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು.
ರಾಜ್ಯದಲ್ಲಿ ಹಿಂಗಾರು ಬೆಳೆ ಹಾನಿಯಿಂದ ನಷ್ಟ ಉಂಟಾಗಿದ್ದು, ಹೀಗಾಗಿ ಹಿಂಗಾರು ನಷ್ಟ ಪರಿಹಾರ ನೀಡಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.
ನವದೆಹಲಿಯ ಸಂಸತ್ ಭವನದ ಪ್ರಧಾನ ಕಚೇರಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಕೊಬ್ಬರಿಗೆ ಪ್ರತಿ ಕ್ವಿಂಟಾಲ್ಗೆ 15 ಸಾವಿರ ರೂಪಾಯಿ ನೀಡಬೇಕು ಜತೆಗೆ ಹಿಂಗಾರು ನಷ್ಟ ಪರಿಹಾರ ನೀಡಬೇಕೆಂದು ಮನವಿ ಮಾಡಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ತುಮಕೂರು ಸಂಸದ ಮುದ್ದೇಹನುಮೇಗೌಡ ಅವರು ಸಾಥ್ ನೀಡಿದರು.
