ಉತ್ತರ ಪ್ರದೇಶ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿಯ ವಿಜಯವನ್ನು ‘ದೇಶದಲ್ಲಿ ಅಭಿವೃದ್ಧಿಗೆ ಸಂದ ಮತ್ತೊಂದು ವಿಜಯ’ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
ನವದೆಹಲಿ: ಉತ್ತರ ಪ್ರದೇಶ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಬಿಜೆಪಿಯ ವಿಜಯವನ್ನು ‘ದೇಶದಲ್ಲಿ ಅಭಿವೃದ್ಧಿಗೆ ಸಂದ ಮತ್ತೊಂದು ವಿಜಯ’ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
ಈ ಕುರಿತು ಟ್ವೀಟಿಸಿರುವ ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಕ್ಷದ ಕಾರ್ಯಕರ್ತರು ಹಾಗೂ ರಾಜ್ಯದ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅಭಿವೃದ್ಧಿಗಾಗಿ ಇನ್ನಷ್ಟು ಶ್ರಮಿಸಲು ಸ್ಪೂರ್ತಿ ಸಿಕ್ಕಿದೆ ಎಂದು ಪ್ರಧಾನಿ ಹೇಳಿದ್ದಾರೆ.
16 ಸ್ಥಳೀಯಾಡಳಿತ ಸಂಸ್ಥೆಗಳ ಪೈಕಿ ಬಿಜೆಪಿಯು 14 ಕಡೆ ಭಾರೀ ಮುನ್ನಡೆ ಸಾಧಿಸಿದೆ. ಉಳಿದೆರಡು ಸ್ಥಳಗಳಲ್ಲಿ ಮಾಯಾವತಿಯವರ ಬಿಎಸ್ಪಿ ಮುನ್ನಡೆ ಸಾಧಿಸಿದೆ.
ತನ್ನ ಭದ್ರಕೋಟೆಯಾಗಿರುವ ಅಮೇಥಿಯಲ್ಲೇ ಕಾಂಗ್ರೆಸ್’ಗೆ ಮುಖಭಂಗವಾಗಿದೆ. ಸಮಾಜವಾದಿ ಪಕ್ಷಕ್ಕೂ ಈ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾಗಿದೆ.
