ಹುಬ್ಬಳ್ಳಿ (ಮೇ. 09): ಪ್ರಚಾರದ ವೇಳೆ ಚಕ್ಕಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ಧಾರವಾಡ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಚ್.ವಿ.ಮಾಡಳ್ಳಿ ಮೃತಪಟ್ಟಿದ್ದಾರೆ.

ಎರಡು ದಿನಗಳ ಹಿಂದೆ ನವಲಗುಂದ ‌ಕ್ಷೇತ್ರದಲ್ಲಿ ಪ್ರಚಾರದ ವೇಳೆ ಬಿದ್ದು ಗಾಯಗೊಂಡಿದ್ದರು. ಹುಬ್ಬಳ್ಳಿ ‌ಖಾಸಗಿ ಆಸ್ಪತ್ರೆ ಯಲ್ಲಿ ಅವರನ್ನು ದಾಖಲಿಸಲಾಗಿತ್ತು. ಚಿಕಿತ್ಸೆಗೆ ದೇಹ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ.