ಧಾರವಾಡದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯೋಜಿರುವ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ.

ಧಾರವಾಡ: ಧಾರವಾಡದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯೋಜಿರುವ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ.

ಧಾರವಾಡ ನಗರದ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದಿವಂಗತ ಸಾಹಿತಿಗಳ ಭಾವಚಿತ್ರಕ್ಕೆ ಹೂಮಾಲೆ ಹಾಕುವ ಜೊತೆಗೆ ಸಾಹಿತಿ‌ ಗಿರೀಶ್ ಕಾರ್ನಾಡ್ ಮತ್ತು ಡಾ. ಚಂದ್ರಶೇಖರ ಕಂಬಾರ ಭಾವಚಿತ್ರಗಳಿಗೂ ಮಾಲೆ ಹಾಕಿದ್ದಾರೆ.

ಸಾಹಿತಿ‌ ಗಿರೀಶ್ ಕಾರ್ನಾಡ್ ಮತ್ತು ಡಾ. ಚಂದ್ರಶೇಖರ ಕಂಬಾರ ಭಾವಚಿತ್ರಗಳಿಗೆ ವಿಭೂತಿ ಬಳಿದು, ಕುಂಕುಮವಿಟ್ಟ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಬಳಿಕ ಎಚ್ಚೆತ್ತ ಅಧಿಕಾರಿಗಳು ಮಾಲೆ ಕಿತ್ತು ಹಾಕಿದ್ದಾರೆ.