ಜೇವರ್ಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ

ಕಲಬುರ್ಗಿ(ಜು.27): ಇಂದು ವಿಧಿವಶರಾದ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ಅಂತ್ಯಕ್ರಿಯೆಯನ್ನು  ಗ್ರಾಮಸ್ಥರ ಒತ್ತಾಯದ ಮೇರೆಗೆ ಅವರ ಹುಟ್ಟೂರು ನೆಲೋಗಿಯಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಜೇವರ್ಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಾದ ನಂತರ ನೆಲೋಗಿಯಲ್ಲಿ ಅಂತಿಮ ದರ್ಶನದ ನಂತರ ಬಳಿಕ ಧರ್ಮ ಸಿಂಗ್ ಅವರ ನೆಲೋಗಿಯ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.