ಸುಪ್ರೀಂ ಕೋರ್ಟ್ ತೀರ್ಪು ನೀಡುವಾಗ  ಮೂಲ ಒಪ್ಪಂದವನ್ನು ಆಧಾರವಾಗಿಟ್ಟುಕೊಳ್ಳುವುದರಿಂದ ಮೂಲ ಒಪ್ಪಂದದಲ್ಲಿಯೇ ತಿದ್ದುಪಡಿ ಆಗಬೇಕು ಎಂಬ ಅಭಿಪ್ರಾಯವನ್ನು ಮಾಜಿ ಸಂಸದೆ ರಮ್ಯಾ ವ್ಯಕ್ತಪಡಿಸಿದ್ದಾರೆ

ತಲಕಾವೇರಿ (ಅ.17): ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಯಬೇಕಿದ್ದರೆ ಮೂಲ ಒಪ್ಪಂದದಲ್ಲಿಯೆ ಬದಲಾವಣೆ ಆಗಬೇಕು, ಅದಕ್ಕಾಗಿ ಎರಡು ರಾಜ್ಯಗಳು ಮಾತುಕತೆ ನಡೆಸಬೇಕೆಂದು ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಲಕಾವೇರಿ ತೀರ್ಥೊದ್ಬವ ವೀಕ್ಷಣೆಗೆ ಆಗಮಿಸಿದ್ದ ರಮ್ಯಾ, ಸುಪ್ರೀಂ ಕೋರ್ಟ್ ತೀರ್ಪು ನೀಡುವಾಗ ಮೂಲ ಒಪ್ಪಂದವನ್ನು ಆಧಾರವಾಗಿಟ್ಟುಕೊಳ್ಳುವುದರಿಂದ ಮೂಲ ಒಪ್ಪಂದದಲ್ಲಿಯೇ ತಿದ್ದುಪಡಿ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಆ ನಿಟ್ಟಿನಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಮುಖಾಮುಖಿ ಕೂರಿಸಿ ಮಾತುಕತೆ ನಡೆಸುವ ಕೆಲಸ ಮಾಡಬೇಕು ಎಂದು ರಮ್ಯಾ ಹೇಳಿದ್ದಾರೆ.

ಪ್ರಾಕೃತಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಂಡು ಉಳಿಸಿಕೊಳ್ಳುವ ಜವಾಬ್ದಾರಿಯನ್ನು ಎಲ್ಲರೂ ನಿಭಾಯಿಸಬೇಕೆಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದ್ದಾರೆ.