ಇಂದೋರ್‌[ಮಾ.04]: ಪಾಕ್ ವಶದಲ್ಲಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಭಾರತಕ್ಕೆ ಮರಳಿ ಬಂದಿದ್ದಾರೆ. ಸದ್ಯ ಈ ವಿಚರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ರನ್ನು ಹೊಗಳಿದ್ದಾರೆ.

ಪಾಕಿಸ್ತಾನದ ಸೇನೆ ಹಾಗೂ ಐಎಸ್‌ಐನ ವಿರೋಧದ ಹೊರತಾಗಿಯೂ ಯಾವುದೇ ಚೌಕಾಸಿ ಇಲ್ಲದೇ ಭಾರತೀಯ ವಾಯುಸೇನೆಯ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ತಮಾನ್‌ರನ್ನು ಪಾಕ್‌ ಪ್ರಧಾನಿ ಇಮ್ರಾನ್‌ಖಾನ್‌ ಬಿಡುಗಡೆ ಮಾಡಿದ್ದನ್ನು ಕಾಂಗ್ರೆಸ್‌ ಮುಖಂಡ ದಿಗ್ವಿಜಯ್‌ ಸಿಂಗ್‌ ಪ್ರಶಂಸಿಸಿದ್ದಾರೆ.

ಈ ಕುರಿತು ಸ್ಥಳೀಯ ಜನರೂ ಸಹ ವಿರೋಧ ವ್ಯಕ್ತಪಡಿಸಿದಾಗಲೂ ಅದನ್ನು ನೋಡದೇ ‘ಅಭಿ’ ಬಿಡುಗಡೆ ಮಾಡಿದ ಇಮ್ರಾನ್‌ಖಾನ್‌ಗೆ ‘ಧನ್ಯವಾದಗಳು’ನ್ನು ತಿಳಿಸಿದ್ದಾರೆ.