ಇತ್ತೀಚೆಗಷ್ಟೇ ಗೋವಾ, ಕರ್ನಾಟಕ ಮತ್ತು ತೆಲಂಗಾಣದ ಉಸ್ತುವಾರಿಯಿಂದ ಕೈಬಿಡಲ್ಪಟ್ಟಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಪಕ್ಷದ ಎಲ್ಲ ಹುದ್ದೆಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷೆ ಸೋನಿಯಾ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ.
ನವದೆಹಲಿ(ಆ.07): ಇತ್ತೀಚೆಗಷ್ಟೇ ಗೋವಾ, ಕರ್ನಾಟಕ ಮತ್ತು ತೆಲಂಗಾಣದ ಉಸ್ತುವಾರಿಯಿಂದ ಕೈಬಿಡಲ್ಪಟ್ಟಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಪಕ್ಷದ ಎಲ್ಲ ಹುದ್ದೆಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷೆ ಸೋನಿಯಾ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ.
ಸೆ.30ರಿಂದ 3300 ಕಿ.ಮೀ ಧಾರ್ಮಿಕ ಪಾದ ಯಾತ್ರೆ ಹಿನ್ನೆಲೆಯಲ್ಲಿ ಈ ಮನವಿ ಮಾಡಿದ್ದೇನೆ ಎಂದು ದಿಗ್ವಿಜಯ್ ಹೇಳಿದ್ದಾರೆ. ಆದರೆ ಏಕಾಏಕಿ ಮೂರು ರಾಜ್ಯಗಳ ಉಸ್ತುವಾರಿಯಿಂದ ಕೈಬಿಟ್ಟಿದ್ದು ಅವರ ಈ ನಿರ್ಧಾರಕ್ಕೆ ಪ್ರಮುಖ ಕಾರಣಗಳಲ್ಲಿ ಒಂದು ಹೇಳಲಾಗುತ್ತಿದೆ.
