Asianet Suvarna News Asianet Suvarna News

ಜಯಾ ಸಾವಿನ ತನಿಖೆ ಕುರ್ಚಿ ಉಳಿಸುವ ತಂತ್ರ: ದಿನಕರನ್ ಕಿಡಿ

ಜಯಲಲಿತಾ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ನಿರ್ಧರಿಸಿರುವುದು ಕುರ್ಚಿ ಉಳಿಸಿಕೊಳ್ಳುವ ತಂತ್ರ ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ವಿರುದ್ಧ ಟಿ.ಟಿ.ವಿ.ದಿನಕರನ್ ಕಿಡಿಕಾರಿದ್ದಾರೆ. ಪರಪ್ಪನ ಅಗ್ರಹಾರದ ಶಶಿಕಲಾ ಭೇಟಿಯಾಗಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರ ಇಚ್ಛೆಗೆ ವಿರುದ್ಧವಾಗಿ ತಮಿಳುನಾಡು ಸರ್ಕಾರ ನಡೆದುಕೊಳ್ಳುತ್ತಿದೆ.  ಪ್ರಾಮಾಣಿಕವಾಗಿ ತನಿಖೆ ನಡೆದರೆ ಸತ್ಯ ಹೊರಬರಲಿದೆ ಎಂದು ಟಿಟಿವಿ ದಿನಕರನ್ ಹೇಳಿದ್ದಾರೆ.

Dinakaran Slams Palanisamy Over Probe into Jayaa Death

ಬೆಂಗಳೂರು: ಜಯಲಲಿತಾ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ನಿರ್ಧರಿಸಿರುವುದು ಕುರ್ಚಿ ಉಳಿಸಿಕೊಳ್ಳುವ ತಂತ್ರ ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ವಿರುದ್ಧ ಟಿ.ಟಿ.ವಿ.ದಿನಕರನ್ ಕಿಡಿಕಾರಿದ್ದಾರೆ.

ಪರಪ್ಪನ ಅಗ್ರಹಾರದ ಶಶಿಕಲಾ ಭೇಟಿಯಾಗಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರ ಇಚ್ಛೆಗೆ ವಿರುದ್ಧವಾಗಿ ತಮಿಳುನಾಡು ಸರ್ಕಾರ ನಡೆದುಕೊಳ್ಳುತ್ತಿದೆ.  ಪ್ರಾಮಾಣಿಕವಾಗಿ ತನಿಖೆ ನಡೆದರೆ ಸತ್ಯ ಹೊರಬರಲಿದೆ ಎಂದು ಟಿಟಿವಿ ದಿನಕರನ್ ಹೇಳಿದ್ದಾರೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಾಲಲಿತಾ ಸಾವಿನ ತನಿಖೆ ನಡೆಸುವುದಾಗಿ ನಿನ್ನೆ ತಮಿಳುನಾಡು ಸರ್ಕಾರ ಘೋಷಿಸಿದೆ.

ಅಮ್ಮಾ ಸಾವಿನ ತನಿಖೆಯಾಗಬೇಕೆಂದು ವ್ಯಾಪಕವಾಗಿ ಮನವಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದರು.

ಕಳೆದ ವರ್ಷ ಸೆಪ್ಟೆಂಬರ್ 22 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 5 ರಂದು ಅಕಾಲಿಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದರು.

Follow Us:
Download App:
  • android
  • ios