ಕರ್ನಾಟಕ ಕಾಂಗ್ರೆಸ್‌ಗೆ ನೂತನ ಸಾರಥಿಯಾಗಿ ದಿನೇಶ್ ಗುಂಡೂರಾವ್ ನೇಮಕ

Dinesh Gundu Rao Appointed As President of Karnataka Congress
Highlights

  • ಪರಮೇಶ್ವರ್ ಸ್ಥಾನಕ್ಕೆ ದಿನೇಶ್ ಗುಂಡೂರಾವ್
  • ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ರನ್ನು ನೇಮಕ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ಅಧಿಕೃತ ಘೋಷಣೆ  ಹೊರಬೀಳುವ ಸಾಧ್ಯತೆಗಳಿವೆ.

2 ವರ್ಷಗಳಿಂದ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ದಿನೇಶ್ ಗುಂಡೂರಾವ್ ಗೆ ಇದೀಗ ಕೆಪಿಸಿಸಿ ಅಧ್ಯಕ್ಷನ ಪಟ್ಟ ಒಲಿದಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ 2 ವರ್ಷಗಳ ಅವಧಿಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಸಚಿವ ಸ್ಥಾನ ಸಿಗದಕ್ಕೆ ಬೇಸರಗೊಂಡಿದ್ದ ಭಾಲ್ಕಿ ಶಾಸಕ ಹಾಗೂ ಮಾಜಿ ಸಚಿವ ಈಶ್ವರ ಖಂಡ್ರೆ ಅವರನ್ನು ಕಾರ್ಯಾಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.

loader