Asianet Suvarna News Asianet Suvarna News

'ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರು.ವರೆಗೆ ಆಮಿಷ'

ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ. ಇದರ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಹಿಸಿದ್ದು, ಆಪರೇಷನ್ ಕಮಲಕ್ಕೆ ಒಳಗಾಗಲು ಕಾಂಗ್ರೆಸ್ ಶಾಸಕರಿಗೆ 50 ರಿಂದ 100 ಕೋಟಿ ರು. ವರೆಗೆ ಹಣದ ಆಮಿಷ ನೀಡಲಾಗಿದೆ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

Dinesh Gundurao Slams  Against BJP Leaders
Author
Bengaluru, First Published Sep 15, 2018, 11:25 AM IST

ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ. ಇದರ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಹಿಸಿದ್ದು, ಆಪರೇಷನ್ ಕಮಲಕ್ಕೆ ಒಳಗಾಗಲು ಕಾಂಗ್ರೆಸ್ ಶಾಸಕರಿಗೆ 50 ರಿಂದ 100 ಕೋಟಿ ರು. ವರೆಗೆ ಹಣದ ಆಮಿಷ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.

 ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ನಿರ್ದೇಶನದ ಮೇರೆಗೆ ಶಾಸಕರಾದ ಎಸ್.ಆರ್.ವಿಶ್ವನಾಥ್ ಹಾಗೂ ಅಶ್ವತ್ಥನಾರಾಯಣ, ಸಕಲೇಶಪುರ ಟಿಕೆಟ್ ಆಕಾಂಕ್ಷಿ ಸೋಮಶೇಖರ್, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಈ ಸಂಬಂಧ ನಮ್ಮ ಪಕ್ಷದ ಶಾಸಕರು ಮಾಹಿತಿ ನೀಡಿದ್ದಾರೆ. 

ಈ ರೀತಿ ನೂರಾರು ಕೋಟಿ ರು. ಆಮಿಷ ಒಡ್ಡಲು ಬಿಜೆಪಿ ನಾಯಕರು ಅವಲಂಬಿಸಿರುವ ಹಣದ ಮೂಲ ಯಾವುದು ಎಂಬ ಬಗ್ಗೆ ತನಿಖೆಯಾ ಗಬೇಕು. ಹಾಗಾಗಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ ಇಲಾಖೆ (ಐಟಿ)ಯಲ್ಲಿ ದೂರು ನೀಡಲಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. 

ಬಿಜೆಪಿಗರು ಒಡ್ಡುತ್ತಿರುವ ಆಮಿಷಗಳ ತನಿಖೆಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೂ ದೂರು ನೀಡಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳ ಲಾಗುವುದು ಎಂದರು.

Follow Us:
Download App:
  • android
  • ios