ರಾಷ್ಟ್ರೀಯ ನಾಯಕರೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳೂ ಅವರಿಗಿದೆ

ಬೆಂಗಳೂರು(ಸೆ.21): ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮುಂದೆ ರಾಜ್ಯದ ಮುಖ್ಯಮಂತ್ರಿ ಯಾಗುವುದರಲ್ಲಿ ಅನುಮಾನ ವಿಲ್ಲ. ಅದೇ ರೀತಿ ಈಗ ಮೇಯರ್ ಆಗಿರುವ ಜಿ. ಪದ್ಮಾವತಿ ಅವರು ರಾಜಾಜಿನಗರ ವಿ‘ಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮುಂದೆ ಶಾಸಕರಾಗಿ ಆಯ್ಕೆಯಾಗುತ್ತಾರೆ.

ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷರೂ ಆದ ಚಿಕ್ಕಪೇಟೆ ಶಾಸಕ ಆರ್.ವಿ. ದೇವರಾಜ್, ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕೊಳಗೇರಿ ನಿವಾಸಿಗಳಿಗೆ 933 ಮನೆಗಳ ನಿರ್ಮಾಣ ಕಾರ್ಯಕ್ರಮದಲ್ಲಿ ಹೀಗಂತ ಭವಿಷ್ಯ ನುಡಿಯುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದರು. ದಿನೇಶ್ ಗುಂಡೂರಾವ್ ಪ್ರ‘ಭಾವಿ ಪ್ರಬಲ ನಾಯಕ, ಅವರು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳೂ ಅವರಿಗಿದೆ ಎಂದು ಅವರು ಹೇಳಿದರು.

ಅದೇ ರೀತಿ ಪ್ರಸ್ತುತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿರುವ ಜಿ. ಪದ್ಮಾವತಿ ಅವರು 2018ರ ಚುನಾವಣೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಫರ್ಧಿಸುತ್ತಾರೆ. ಇದಕ್ಕೆ ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಮ್ಮತಿಸಿದ್ದಾರೆ. ಹಾಗಾಗಿ ಮೇಯರ್ ಆಗಿ ಉತ್ತಮ ಕಾರ್ಯಗಳನ್ನು ಮಾಡಿರುವ ಅವರು ಮುಂದೆ ಶಾಸಕಿಯಾದರೆ ಜನರಿಗಾಗಿ ಇನ್ನೂ ಉತ್ತಮ ಕೆಲಸಗಳನ್ನು ಮಾಡುತ್ತಾರೆ ಎಂದರು