ಹಾಸನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್‌ ಅಧಿಕಾರಿ ಡಿ.ರಂದೀಪ್‌ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಶಿಸ್ತು ಕ್ರಮ ಜರುಗಿಸಿ ತನಿಖೆ ನಡೆಸುವಂತೆ ಭಾರತ ಚುನಾವಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಮಂಗಳವಾರ ಆದೇಶಿಸಿದೆ. 


ಹಾಸನ: ಹಾಸನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್‌ ಅಧಿಕಾರಿ ಡಿ.ರಂದೀಪ್‌ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಶಿಸ್ತು ಕ್ರಮ ಜರುಗಿಸಿ ತನಿಖೆ ನಡೆಸುವಂತೆ ಭಾರತ ಚುನಾವಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಮಂಗಳವಾರ ಆದೇಶಿಸಿದೆ. 

ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ರಾಜ್ಯ ಸರ್ಕಾರ ಜ.22ರಂದು ವರ್ಗಾವಣೆ ಮಾಡಿ, ಆ ಸ್ಥಾನಕ್ಕೆ ಏ.15ರಂದು ರಂದೀಪ್‌ ಅವರನ್ನು ನೇಮಕ ಮಾಡಿತ್ತು. 

ಈ ವೇಳೆ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇದ್ದ ಕಾರಣ ರಂದೀಪ್‌ ಅವರು ಅಧಿಕಾರ ವಹಿಸಿಕೊಳ್ಳುವ ಮುನ್ನ ರಾಜ್ಯ ಚುನಾವಣಾ ಅಯೋಗದ ಅನುಮತಿಯನ್ನು ಪಡೆಯಬೇಕಿತ್ತು. 

ಆದರೆ ನೇರವಾಗಿ ಅಧಿಕಾರ ಅಧಿಕಾರ ವಹಿಸಿಕೊಳ್ಳುವ ಮೂಲಕ ರಂದೀಪ್‌ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದಾಗಿ ಆರೋಪಿಸಲಾಗಿದೆ. ಆದ್ದರಿಂದ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಸರ್ಕಾರಕ್ಕೆ ಸೂಚಿಸಿದೆ.