ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಟೀಕಿಸುವ ಮೂಲಕ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಮಹಾರಾಷ್ಟ್ರದ ಗೊಂಡಿಯಾದ ಬಿಜೆಪಿ ಸಂಸದ ನಾನಾ ಪಟೋಲೆ ತಮ್ಮ ಸಂಸತ್ ಸ್ಥಾನ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ನವದೆಹಲಿ(ಡಿ.9): ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಟೀಕಿಸುವ ಮೂಲಕ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಮಹಾರಾಷ್ಟ್ರದ ಗೊಂಡಿಯಾದ ಬಿಜೆಪಿ ಸಂಸದ ನಾನಾ ಪಟೋಲೆ ತಮ್ಮ ಸಂಸತ್ ಸ್ಥಾನ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ನೀತಿಗಳನ್ನು ವಿರೋಧಿಸಿ ಶುಕ್ರವಾರ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ರೈತರ ಸಮಸ್ಯೆಗಳ ನಿರ್ವಹಣೆಯಲ್ಲಿ ಸರ್ಕಾರದ ನೀತಿಗಳ ವಿಲೀನತೆ, ನೋಟು ಅಪನಗದೀಕರಣ, ಜಿಎಸ್ಟಿ ಸೇರಿದಂತೆ 14 ಕಾರಣಗಳನ್ನು ಮುಂದಿಟ್ಟು ತಾವು ರಾಜೀನಾಮೆ ನೀಡಿದ್ದಾಗಿ ಪಟೋಲೆ ತಿಳಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್’ಲ್ಲಿದ್ದ ಪಟೋಲೆ ಕಳೆದ ಚುನಾವಣೆ ವೇಳೆ ಬಿಜೆಪಿ ಸೇರಿ, ಎನ್ಸಿಪಿಯ ಪ್ರಫುಲ್ ಪಟೇಲ್ ವಿರುದ್ಧ ಗೆಲುವು ಸಾಧಿಸಿದ್ದರು. ಪಟೋಲೆ ಡಿ.11ರಂದು ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ.