Breaking: ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ರಾಜೀನಾಮೆ

ಉಪಚುನಾವಣೆ ದಿನಾಂಕ ಘೋಷಣೆಯಾಗಿತ್ತಿದ್ದಂತೆಯೇ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ರಾಜೀನಾಮೆ| ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ರಾಜೀನಾಮೆ ನೀಡಿದ ಸುಧಾಕರ್ .

disqualified congress mla Dr Sudhakar resigns To Karnataka Pollution Control Board

ಬೆಂಗಳೂರು, (ಸೆ.21): ಚಿಕ್ಕಬಳ್ಳಾಪುರ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ಅವರು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸುಧಾಕರ್‌ ನೇಮಕಕ್ಕೆ ಬೇಕಂತಲೇ ಮಾಜಿ ಸಿಎಂ ಕುಮಾರಸ್ವಾಮಿ ಅಡ್ಡಿ!

ಇಂದು (ಶನಿವಾರ) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಧಾಕರ್ ರಾಜೀನಾಮೆ ನೀಡಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾದವಿದ್ದಾಗ ಡಾ.ಸುಧಾಕರ್ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

ದೋಖಾ...ದೋಖಾ..! ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಾ. ಸುಧಾಕರ್‌ ನೇಮಕ ಮಾಡಿಯೇ ಇಲ್ಲ?

ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಅಧಿಕಾರ ಹಂಚಿಕೆಯಾದ ಪ್ರಕಾರ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಸುಧಾಕರ್‌ ಅವರನ್ನು ನೇಮಿಸುವಂತೆ ಕಾಂಗ್ರೆಸ್‌ ನಾಯಕರು ಕುಮಾರಸ್ವಾಮಿ ಅವರಿಗೆ ಸ್ಪಷ್ಟವಾಗಿ ಶಿಫಾರಸು ಮಾಡಿದ್ದರು. 

ಆದರೆ, ಆ ಶಿಫಾರಸಿಗೆ ಕ್ಯಾರೆ ಎನ್ನದ ಕುಮಾರಸ್ವಾಮಿ ಅವರು ಅನೇಕ ದಿನಗಳ ಕಾಲ ಸುಧಾಕರ್‌ ಅವರನ್ನು ನೇಮಿಸಲು ಮುಂದಾಗಲಿಲ್ಲ. ಅಂತಿಮವಾಗಿ ಸುಧಾಕರ್‌ ಅವರು ಬಂಡಾಯದ ಬಾವುಟ ಹಾರಿಸುವುದು ನಿಶ್ಚಿತವಾಗುತ್ತಿದ್ದಂತೆಯೇ ಕುಮಾರಸ್ವಾಮಿ ಅವರು ನೇಮಕಕ್ಕೆ ಹಸಿರು ನಿಶಾನೆ ತೋರಿದ್ದರು.

ಇನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಶಾಸಕ ಕೆ.ಸುಧಾಕರ್‌ ಅವರನ್ನು ನೇಮಕ ಮಾಡಿರುವ ಸರಕಾರದ ಕ್ರಮವನ್ನು ಪ್ರಶ್ನಿಸಿ ಚಿಕ್ಕಬಳ್ಳಾಪುರದವರೇ ಆದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಆಂಜನೇಯ ರೆಡ್ಡಿ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹದು.

Latest Videos
Follow Us:
Download App:
  • android
  • ios