ವಿಧಾನಸಬಾ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸಲು ಡಿ.ಕೆ ರವಿ ತಾಯಿ ಇಂಗಿತ ವ್ಯಕ್ತಪಡಿಸಿದ್ದಾರೆ. ಡಿ.ಕೆ.ರವಿ ಅವರ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಕಣಕ್ಕಿಳಿಯಲು ಇಂಗಿತ ವ್ಯಕ್ತಪಡಿಸಿದ್ದಾರೆ.
ತುಮಕೂರು (ನ.12): ವಿಧಾನಸಬಾ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸಲು ಡಿ.ಕೆ ರವಿ ತಾಯಿ ಇಂಗಿತ ವ್ಯಕ್ತಪಡಿಸಿದ್ದಾರೆ. ಡಿ.ಕೆ.ರವಿ ಅವರ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಕಣಕ್ಕಿಳಿಯಲು ಇಂಗಿತ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಕಣಕ್ಕಿಳಿಯಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ. ಯಾವುದಾದರೂ ಪಕ್ಷ ಅಥವಾ ಪಕ್ಷೇತರರಾಗಿ ಸ್ಪರ್ಧಿಸಲು ಒತ್ತಾಯಿಸಿದ್ದು, ಡಿ.ಕೆ.ರವಿ ಸಾವಿಗೆ ನ್ಯಾಯ ಸಿಕ್ಕಿಲ್ಲ. ಈ ಸಂಬಂಧ ಸೂಕ್ತ ತನಿಖೆಗಾಗಿ ಹೋರಾಟ ಅತ್ಯಗತ್ಯ ಎಂದು ಅಭಿಮಾನಿಗಳು ಹೇಳಿದ್ದಾರೆ.
ನನ್ನ ಮಗನ ಅಭಿಮಾನಿಗಳ ಒತ್ತಾಯದಿಂದ ನಾನು ಸ್ಪರ್ಧೆಗೆ ಮುಂದಾಗಿದ್ದೇನೆ. ಕೋಲಾರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಚಿಂತನೆ ನಡೆಸಿದ್ದೇನೆ ಎಂದು ಡಿಕೆ ರವಿ ತಾಯಿ ಗೌರಮ್ಮ ಹೇಳಿದ್ದಾರೆ.
