ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕುಣಿಗಲ್(ಏ.23): ಮಾಜಿ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ ಅವರ ಅಣ್ಣನ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರವಿ ಅವರ ಅಣ್ಣನ ಪತ್ನಿ ಶಶಿಕಲಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಆತ್ಮಹತ್ಯಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದ್ದು ಸದ್ಯ ಮಂಡ್ಯದ ನಾಗಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.