ಬೆಂಗಳೂರು [ಸೆ.05]: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಇಡಿ ಬಂಧನ ಖಂಡಿಸಿ ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿರಾಕರಿಸಿದರು.

ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಡಿ.ಕೆ.ಶಿವಕುಮಾರ್‌ ಬಂಧನ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. 

ಉಪಮುಖ್ಯಮಂತ್ರಿ ಅಶ್ವತ್‌ ನಾರಾಯಣ್‌, ಡಿ.ಕೆ.ಶಿವಕುಮಾರ್‌ ಬಂಧನ ಕುರಿತು ನಾನು ಈಗಾಗಲೇ ಪ್ರತಿಕ್ರಿಯೆ ನೀಡಿದ್ದೇನೆ. ಮತ್ತೆ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ. ರಾಜ್ಯದಲ್ಲಿ ಶಾಂತಿ ಕಾಪಾಡುವುದು ನಮ್ಮ ಕರ್ತವ್ಯ, ಕಾಪಾಡುತ್ತೇವೆ ಎಂದರು.