ಬೆಂಗಳೂರು [ಜು.09]: ಸಮ್ಮಿಶ್ರ ಸರ್ಕಾರದ ಶಾಸಕರು ಸಾಲು- ಸಾಲಾಗಿ ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹಠಾತ್ ದೆಹಲಿಗೆ ಪ್ರಯಾಣ ಬೆಳೆಸಿದ್ದು, ವಾಪಸಾಗಿದ್ದಾರೆ. ಅವರ ಈ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸೋಮವಾರ ಸದಾಶಿವನಗರದ ಪರಮೇಶ್ವರ್ ಅವರ ಸರ್ಕಾರಿ ಅತಿಥಿಗೃಹದಲ್ಲಿ ನಡೆದ ಸಭೆ ಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಅವರು, ಬಳಿಕ ಮುಂಬೈನಲ್ಲಿರುವ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಮುಂಬೈಗೆ ತೆರಳುತ್ತಿದ್ದಾರೆ ಎಂದು ವರದಿ ಯಾಗಿತ್ತು. ಆದರೆ, ಮುಂಬೈಗೆ ತೆರಳದೆ ನೇರವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಠಾತ್ ದೆಹಲಿಗೆ ತೆರಳಿದ್ದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಪತನ ಭೀತಿ ಉಂಟಾಗಿರುವ ಪರಿಸ್ಥಿತಿಯಲ್ಲಿ ದೆಹಲಿಗೆ ಹೋಗಿರುವುದು ಕುತೂಹಲ ಮೂಡಿಸಿದೆ.