ಬೆಂಗಳೂರು(ಜು.14): ವಿಶ್ವಾಸಮತ ಯಾಚನೆ ವೇಳೆ ಅತೃಪ್ತ ಶಾಸಕರು ಸರ್ಕಾರದ ಪರ ಮತ ಚಲಾಯಿಸಲಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಡಿಕೆಶಿ, ಮುಂಬೈನಲ್ಲಿರುವ ಅತೃಪ್ತ ಶಾಸಕರು ನೈಜ ಕಾಂಗ್ರೆಸ್ಸಿಗರಾಗಿದ್ದು ತಮ್ಮ ಕ್ಷೇತ್ರದಲ್ಲಿ ಗೆಲುವಿಗಾಗಿ ಹುಲಿಯಂತೆ ಕಾದಾಡಿದ್ದಾರೆ ಎಂದು ಹೇಳಿದ್ದಾರೆ.

ಅತೃಪ್ತ ಶಾಸಕರು ಶೀಘ್ರದಲ್ಲೇ ಮರಳಲಿದ್ದು, ಸಮ್ಮಿಶ್ರ ಸರ್ಕಾರವನ್ನು ಉಳಿಸುವ ಕೆಲಸ ಮಾಡಲಿದ್ದಾರೆ ಎಂದು ಡಿಕೆಶಿ ಭರವಸೆ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಅತೃಪ್ತ ಶಾಸಕರಿಗೆ ಎಚ್ಚರಿಕೆಯನ್ನೂ ನೀಡಿರುವ ಡಿಕೆಶಿ, ಕಾಂಗ್ರೆಸ್ ತನ್ನೆಲ್ಲಾ ಶಾಸಕರಿಗೂ ವಿಪ್ ಜಾರಿ ಮಾಡಿದ್ದು ಒಂದು ವೇಳೆ ಯಾರಾದರೂ ಸರ್ಕಾರದ ವಿರುದ್ಧ ಮತ ಚಲಾಯಿಸಿದರೆ ಅವರ ಶಾಸಕತ್ವ ಅನರ್ಹಗೊಳ್ಳಲಿದೆ ಎಂದು ಹೇಳಿದ್ದಾರೆ.