ವಿಧಾನಸಭಾ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ನಿರೀಕ್ಷೆ ಏನು..?

First Published 27, Feb 2018, 12:20 PM IST
DK Shivakumar Contest From Ramanagar
Highlights

ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಸಾತನೂರು ವಿಧಾನಸಭಾ ಕ್ಷೇತ್ರ ಅಸ್ತಿತ್ವ ಕಳೆದುಕೊಂಡ ಹಿನ್ನೆಲೆಯಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಅವರು ಈ ಕ್ಷೇತ್ರ ಆಯ್ದುಕೊಂಡರು. ಕಳೆದ ಎರಡು ಚುನಾವಣೆಗಳಲ್ಲಿ ಜಯಭೇರಿ ಬಾರಿಸಿರುವ ಅವರು ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದಾರೆ.

ರಾಮನಗರ : ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಸಾತನೂರು ವಿಧಾನಸಭಾ ಕ್ಷೇತ್ರ ಅಸ್ತಿತ್ವ ಕಳೆದುಕೊಂಡ ಹಿನ್ನೆಲೆಯಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಅವರು ಈ ಕ್ಷೇತ್ರ ಆಯ್ದುಕೊಂಡರು. ಕಳೆದ ಎರಡು ಚುನಾವಣೆಗಳಲ್ಲಿ ಜಯಭೇರಿ ಬಾರಿಸಿರುವ ಅವರು ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದಾರೆ.

ಈ ಹಿಂದೆ ಜೆಡಿಎಸ್ ಭದ್ರಕೋಟೆಯಾಗಿದ್ದ ಕನಕಪುರ, ಡಿಕೆಶಿ ಪ್ರವೇಶದ ನಂತರ ಎರಡನೇ ಸ್ಥಾನಕ್ಕೆ ಕುಸಿದಿದೆ. 2008ರಲ್ಲಿ ಡಿಕೆಶಿ ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳಿಂದ ಪರಾಭವಗೊಂಡಿದ್ದ ಡಿ.ಎಂ. ವಿಶ್ವನಾಥ್ ಅವರನ್ನು ಮತ್ತೆ ಕಣಕ್ಕಿಳಿಸಲು ಜೆಡಿಎಸ್ ಉದ್ದೇಶಿಸಿದೆ.

ಆದರೆ ಮೊದಲ ಪಟ್ಟಿಯಲ್ಲಿ ಹೆಸರು ಘೋಷಣೆಯಾಗಿಲ್ಲ. 2013 ರಲ್ಲಿ ಪಿಜಿಆರ್ ಸಿಂಧ್ಯಾ ಅವರು ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಂದಿನಿಗೌಡ ಒಲವು ತೋರಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಡಿಕೆಶಿ ಅವರಿಗೆ ರಾಜ್ಯಾದ್ಯಂತ ಪಕ್ಷದ ಪರವಾಗಿ ಪ್ರಚಾರ ರೂಪಿಸುವ ಹೊಣೆ ಹೆಗಲಿಗೇರಿದೆ. ಹೀಗಾಗಿ ಅವರು ಕ್ಷೇತ್ರದ ಹೊರಗೇ ಹೆಚ್ಚು ಸಮಯ ಮೀಸಲಿಡಬೇಕಾಗಿದೆ.

loader