ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಬೆಂಗಳೂರು, (ಸೆ.19): ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

Add Asianetnews Kannada as a Preferred SourcegooglePreferred

 ತಮ್ಮ ಮೇಲೆ ಇಡಿ ದಾಖಲಿಸಿರುವ ಎಫ್ ಐಆರ್, ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪು ಹಣ ನೀಡುವ ಬಿಜೆಪಿ ಆರೋಪಕ್ಕೆ ಡಿಕೆಶಿ ಸ್ಪಷ್ಟನೆ ನೀಡಲು ಆಸ್ಪತ್ರೆಯಿಂದ ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಮತ್ತೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾತ್ತಿದೆ. ಫುಡ್ ಪಾಯ್ಸನ್ ನಿಂದ ಅನಾರೋಗ್ಯಕ್ಕೀಡಾಗಿದ್ದ ಡಿ.ಕೆ. ಶಿವಕುಮಾರ್ ನಿನ್ನೆ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.

"

ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಅವರು ಡಿಕೆಶಿ ವಿರುದ್ಧ ಹಲವು ಗಂಭೀರ ಆರೋಪಗಳನ್ನ ಮಾಡಿದ್ದರು. ಆ ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ನೀಡಲು ಡಿಕೆಶಿ ತಮ್ಮ ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಒಟ್ಟಿನಲ್ಲಿ ಅನಾರೋಗ್ಯದ ನಡುವೆಯೂ ಡಿಕೆಶಿ ಆಸ್ಪತ್ರೆಯಿಂದ ಹೊರಬಂದು ಸುದ್ದಿಗೋಷ್ಠಿ ನಡೆಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ