ಆದಾಯ ತೆರಿಗೆ ಅಧಿಕಾರಿಗಳ ದಾಳಿ ಬಳಿಕ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು 2ನೇ ಬಾರಿಗೆ ಕುಟುಂಬ ಸಮೇತರಾಗಿ ಚಾಮುಂಡಿ ತಾಯಿಯ ದರ್ಶನ ಪಡೆದು, ದೇವಸ್ಥಾನಕ್ಕೆ 2 ಬೆಳ್ಳಿ ಆನೆಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಹರಕೆಯನ್ನು ತೀರಿಸಿದ್ದಾರೆ.

ಮೈಸೂರು(ಸೆ.25): ಆದಾಯ ತೆರಿಗೆ ಅಧಿಕಾರಿಗಳ ದಾಳಿ ಬಳಿಕ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು 2ನೇ ಬಾರಿಗೆ ಕುಟುಂಬ ಸಮೇತರಾಗಿ ಚಾಮುಂಡಿ ತಾಯಿಯ ದರ್ಶನ ಪಡೆದು, ದೇವಸ್ಥಾನಕ್ಕೆ 2 ಬೆಳ್ಳಿ ಆನೆಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಹರಕೆಯನ್ನು ತೀರಿಸಿದ್ದಾರೆ.

ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಅವರು 31ಕೆಜಿ ತೂಕದ 2 ಬೆಳ್ಳಿ ಆನೆಗಳನ್ನು ಹರಕೆಯಾಗಿ ನೀಡಿದರು. ಸುದ್ದಿಗಾರರ ಜತೆ ಮಾತನಾಡಿ, ಈ ಹಿಂದೆ ನೀಡಿದ್ದ ಬೆಳ್ಳಿ ಆನೆ ಸರಿ ಇರಲಿಲ್ಲ, ಹೀಗಾಗಿ ಈಗ ಹೊಸ ಬೆಳ್ಳಿ ಆನೆ ನೀಡಿದ್ದೇನೆ. ನಾನು ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ದೇವಿ ನೆರವೇರಿಸಿದ್ದಾಳೆ ಎಂದು ಹೇಳಿದರು.