ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ವಿದೇಶಕ್ಕೆ ತೆರಳಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಚುರುಕಿನ ಬೆಳವಣಿಗೆಗಳು ನಡೆದಿವೆ. ನಿನ್ನೆ ಬೆಂಗಳೂರಿನಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ದಿಢೀರ್ ಸಚಿವರ ನಡೆದಿದ್ದು ಕೆಪಿಸಿಸಿ ಅಧ್ಯಕ್ಷ ಹುದ್ದೆಗಾಗಿ ಪ್ರಯತ್ನ ನಡೆದಿದೆ ಎನ್ನಲಾಗಿದೆ.
ಬೆಂಗಳೂರು(ಮಾ.07): ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ವಿದೇಶಕ್ಕೆ ತೆರಳಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಚುರುಕಿನ ಬೆಳವಣಿಗೆಗಳು ನಡೆದಿವೆ. ನಿನ್ನೆ ಬೆಂಗಳೂರಿನಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ದಿಢೀರ್ ಸಚಿವರ ನಡೆದಿದ್ದು ಕೆಪಿಸಿಸಿ ಅಧ್ಯಕ್ಷ ಹುದ್ದೆಗಾಗಿ ಪ್ರಯತ್ನ ನಡೆದಿದೆ ಎನ್ನಲಾಗಿದೆ.
ಗೃಹ ಇಲಾಖೆಯ ಅಧಿಕೃತ ಕಾರ್ಯಕ್ರಮದ ನಿಮಿತ್ತ ಲಂಡನ್ ಪ್ರವಾಸದಲ್ಲಿರುವ ಗೃಹಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ಗೆ ಬೆಂಗಳೂರಿನಿಂದ ಒಂದು ಸಣ್ಣ ಶಾಕಿಂಗ್ ಸುದ್ದಿ ತಲುಪಿದೆ. 2018ರ ಚುನಾವಣೆಯವರೆಗೂ ಮಂತ್ರಿ ಸ್ಥಾನವನ್ನೂ ತೊರೆದು ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುವ ಲೆಕ್ಕಾಚಾರದಲ್ಲಿರುವ ಪರಮೇಶ್ವರ್ಗೆ ಅಡ್ಡಿಯಾಗುವ ಬೆಳವಣಿಗೆಗಳು ನಡೆದಿವೆ. ಅಧ್ಯಕ್ಷ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿರುವ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರಿನಲ್ಲಿ ಬಲಪ್ರದರ್ಶನದ ಮಾದರಿಯಲ್ಲಿ ಸಚಿವರ ಸಭೆ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತಾದ ಸಭೆ ಎನ್ನುವುದನ್ನು ಸಚಿವರು ಒಪ್ಪಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಆದ್ರೆ ಅಲ್ಲಿ ನಡೆದಿದ್ದು ಮಾತ್ರ ಅಧ್ಯಕ್ಷರ ಬದಲಾವಣೆ ವಿಚಾರದ ಚರ್ಚೆಯೇ.. ಅಷ್ಟೇ ಅಲ್ಲ ಇದೇ ವಿಚಾರವಾಗಿ ದೆಹಲಿಗೆ ನಿಯೋಗ ತೆರಳುವ ಬಗ್ಗೆಯೂ ಚರ್ಚೆಯಾಗಿದೆ ಎನ್ನಲಾಗ್ತಿದೆ.
ಸಭೆಯಲ್ಲಿ ಹಿರಿಯ ಸಚಿವರಾದ ಆರ್.ವಿ. ದೇಶಪಾಂಡೆ, ರಮೇಶ್ ಕುಮಾರ್, ಎಂ.ಬಿ. ಪಾಟೀಲ್, ಡಾ. ಎಚ್.ಸಿ. ಮಹದೇವಪ್ಪ, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ ಮೊದಲಾದವರು ಭಾಗವಹಿಸಿದ್ದರು. ಅದೇನೆ ಇರಲಿ.. ಪರಮೇಶ್ವರ್ ಲಂಡನ್ಗೆ ತೆರಳಿರುವ ಸಮಯದಲ್ಲೇ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವರ ಸಭೆ ಈ ಊಹಾಪೋಹಗಳಿಗೆ ಪುಷ್ಠಿ ನೀಡುತ್ತಿರೋದಂತೂ ಸತ್ಯ
ಕಿರಣ್ ಹನಿಯಡ್ಕ, ಸುವರ್ಣ ನ್ಯೂಸ್.
