ಕೇಳಿದರೂ ಸಿಗಲಿಲ್ಲ ತಮಗೆ ಇಂಧನ ಖಾತೆ : ಡಿಕೆಶಿ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 15, Jul 2018, 8:58 AM IST
DK Shivakumar May Not Happy Over PortFolio
Highlights

ಮೈತ್ರಿ ಸರ್ಕಾರದಲ್ಲಿ ಖಾತೆ ಹಂಚಿಕೆ ವೇಳೆ ಇಂಧನ ಖಾತೆಗೆ ಬೇಡಿಕೆ ಇಟ್ಟಿದ್ದೆ, ಆದರೆ ಸಿಗಲಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಖಾತೆ ಹಂಚಿಕೆ ವೇಳೆ ಇಂಧನ ಖಾತೆಗೆ ಬೇಡಿಕೆ ಇಟ್ಟಿದ್ದೆ, ಆದರೆ ಸಿಗಲಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ಭಾರತೀಯ ವೈದ್ಯಕೀಯ ಸಂಘ ರಾಜ್ಯ ಶಾಖೆ ವತಿಯಿಂದ ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ ಡಾ.ಬಿ. ಸಿ.ರಾಯ್ ಜನ್ಮ ದಿನಾಚರಣೆ ಹಾಗೂ ವೈದ್ಯರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲೂ ಇಂಧನ ಖಾತೆ ಕೇಳಿದ್ದೆ. ಏಕೆಂದರೆ, ಹಿಂದಿನ ಸರ್ಕಾರದಲ್ಲಿ ಇಂಧನ ಸಚಿವನಾಗಿದ್ದಾಗ ಪಾವಗಡದಲ್ಲಿ 13 ಸಾವಿರ ಎಕರೆ ಜಮೀನಿನಲ್ಲಿ ಜಗತ್ತಿನ ಗಮನ ಸೆಳೆಯುವಂತಾ ಸೋಲಾರ್ ಪಾರ್ಕ್ ನಿರ್ಮಿಸಿದ್ದೆ. 

ಈ ಬಾರಿ ಇಂಧನ ಖಾತೆ ಪಡೆದು ಅದನ್ನು ಉದ್ಘಾಟಿಸೋಣ ಎಂದು ಕೊಂಡಿದ್ದೆ. ಆದರೆ, ಅವಕಾಶ ಸಿಗಲಿಲ್ಲ. ನೀರಾವರಿ, ವಸತಿ ಖಾತೆಗೆ ತೆಗೆದುಕೊಳ್ಳುವಂತೆ ಹೇಳಿದರು. ಅದಕ್ಕೂ ಒಪ್ಪಲಿಲ್ಲ. ಶಿಕ್ಷಣದ ಬಗ್ಗೆ ಆಸಕ್ತಿ ಇದ್ದಿದ್ದರಿಂದ ವೈದ್ಯಕೀಯ ಶಿಕ್ಷಣ ಖಾತೆ ಆರಿಸಿಕೊಂಡೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

loader