ನವದೆಹಲಿ [ಆ.24]:  ಮೈತ್ರಿ ಸರ್ಕಾರ ಪತನಗೊಳ್ಳಲು ಸಿದ್ದರಾಮಯ್ಯ ಕಾರಣ ಎಂಬ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೇಳಿಕೆ, ಅದಕ್ಕೆ ಪ್ರತಿಕ್ರಿಯೆಯಾಗಿ ದೇವೇಗೌಡರದ್ದು ನೀಚ ರಾಜಕಾರಣ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿರುಗೇಟು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ಈ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. 

ರಾಜ್ಯ ರಾಜಕೀಯದಲ್ಲಿ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದೆಹಲಿಯಲ್ಲೇ ಇದ್ದ ಡಿ.ಕೆ.ಶಿವಕುಮಾರ್‌ ಕರ್ನಾಟಕ ಭವನಕ್ಕೆ ಶುಕ್ರವಾರ ಆಗಮಿಸಿದ ವೇಳೆ ಮಾಧ್ಯಮಗಳು ಅವರ ಪ್ರತಿಕ್ರಿಯೆ ಬಯಸಿದಾಗ ಅವರು ಕೈಮುಗಿದು ಸೀದಾ ಭವನದ ಒಳ ಹೋದರು.