ನಮ್ಮ ಬಳಿಯೂ ಡೈರಿಗಳಿವೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಆಲ್‌ ದಿ ಬೆಸ್ಟ್‌, ಗಾಡ್‌ ಬ್ಲೆಸ್‌ ಹಿಮ್‌ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿ: ನಮ್ಮ ಬಳಿಯೂ ಡೈರಿಗಳಿವೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಆಲ್‌ ದಿ ಬೆಸ್ಟ್‌, ಗಾಡ್‌ ಬ್ಲೆಸ್‌ ಹಿಮ್‌ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡುತ್ತಾ, ಯಡಿಯೂರಪ್ಪ ಅವರಿಗೆ ಚುಟುಕಾಗಿಯೇ ಟಾಂಗ್‌ ನೀಡಿದರು.

ಆದಾಯ ತೆರಿಗೆ ಇಲಾಖೆ ದಾಳಿ, ಪರಿಶೀಲನೆಗೆ ಸಂಬಂಧಪಟ್ಟಂತೆ ನಮ್ಮ ಬಳಿಯೂ ಡೈರಿಗಳಿವೆ ಎಂದು ಡಿ.ಕೆ.ಶಿವಕುಮಾರ್‌ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಅದಕ್ಕೆ ಯಡಿಯೂರಪ್ಪ ಅವರು ಕೂಡ ನಮ್ಮ ಬಳಿಯೂ ಡೈರಿಗಳಿವೆ ಎಂದು ತಿರುಗೇಟು ನೀಡಿದ್ದರು.

ಈ ಹಿಂದೆ ಜಲಸಂಪನ್ಮೂಲ ಖಾತೆ ನಿರ್ವಹಿಸಿದ್ದ ಎಂ.ಬಿ.ಪಾಟೀಲ್‌ ಉತ್ತಮ ಕೆಲಸ ಮಾಡಿದ್ದಾರೆ. ಒಳ್ಳೆಯ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅವರ ಅನೇಕ ಕೆಲಸಗಳಿಂದ ನಮ್ಮ ಸರ್ಕಾರಕ್ಕೆ ಒಳ್ಳೆಯ ಹೆಸರು ಬಂದಿದೆ. ಬಹಳ ವರ್ಷಗಳ ನಂತರ ದಕ್ಷಿಣ ಕರ್ನಾಟಕಕ್ಕೆ ಜಲಸಂಪನ್ಮೂಲ ಮಂತ್ರಿ ಸ್ಥಾನ ಸಿಕ್ಕಿದ್ದು ಅವರ ಯೋಜನೆಗಳನ್ನು ಮುಂದುವರಿಸಿಕೊಂಡು ಇನ್ನಷ್ಟು ಉತ್ತಮವಾಗಿ ಕೆಲಸ ಮಾಡಿ ತೋರಿಸುತ್ತೇನೆ.

-ಡಿ.ಕೆ.ಶಿವಕುಮಾರ್‌, ಜಲಸಂಪನ್ಮೂಲ ಸಚಿವ