ಸಚಿವ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್

DK Shivakumar warned KIMS Doctors
Highlights

ಕಿಮ್ಸ್ ಒಪಿಡಿ ಬಂದ್ ಮಾಡಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಿ ಕೆ ಶಿವಕುಮಾರ್  ಖಡಕ್ ಎಚ್ಚರಿಕೆ ನೀಡಿದ್ದಾರೆ. 
 

ಬೆಂಗಳೂರು :  ಕಿಮ್ಸ್ ಒಪಿಡಿ ಬಂದ್ ಮಾಡಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್  ಖಡಕ್ ಎಚ್ಚರಿಕೆ ನೀಡಿದ್ದಾರೆ. 

ಯಾವುದೇ ಕಾರಣಕ್ಕೂ ಕೂಡ ರೋಗಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಕಿಮ್ಸ್ ಆಡಳಿತ ಮಂಡಳಿಗೆ ಸಚಿವರು ತಾಕೀತು ಮಾಡಿದ್ದಾರೆ. 

ಸಚಿವರ ಸೂಚನೆಯ ಹಿನ್ನೆಲೆಯಲ್ಲಿ ಕಿರಿಯ ವೈದ್ಯರನ್ನು ಬಳಸಿ  ಕಿಮ್ಸ್ ಆಡಳಿತ ಮಂಡಳಿ ಒಪಿಡಿ ನಡೆಸುತ್ತಿದೆ.  ಈ ಹಿಂದೆಯೂ ಒಮ್ಮೆ 21 ದಿನ ವೈದ್ಯರು ಮುಷ್ಕರ ಹೂಡಿದ್ದಾಗ ಕಿರಿಯ ವೈದ್ಯರ ಸಹಾಯದಿಂದ ಆಸ್ಪತ್ರೆ ನಡೆಸಲಾಗಿತ್ತು.  

ಇದೀಗ ಸಚಿವರ ಸೂಚನೆ ಮೇರೆಗೆ ಪ್ರತಿಭಟನೆ ನಡೆಯುತ್ತಿದ್ದರೂ ಕೂಡ ರೋಗಿಗಳಿಗೆ ಸಮಸ್ಯೆಯಾಗದಂತೆ ನಿರ್ವಹಣೆ ಮಾಡಲು ಕಿಮ್ಸ್ ಆಡಳಿತ ಮಂಡಳಿ ಸಜ್ಜಾಗಿದೆ. 

loader