ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ. ಇತ್ತ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಡಿಕೆಶಿ ಸೇರಿದಂತೆ ಅವರ ಆಪ್ತರನ್ನು ಕಳೆದ ಮೂರು ದಿನಗಳಿಂದ ನಿರಂತರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಇದರಿಂದಾಗಿ ಸಚಿವ ಡಿಕೆಶಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ವಿಚಾರ ತಿಳಿದು ಬಂದಿದೆ.
ಬೆಂಗಳೂರು(ಆ.04): ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ. ಇತ್ತ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಡಿಕೆಶಿ ಸೇರಿದಂತೆ ಅವರ ಆಪ್ತರನ್ನು ಕಳೆದ ಮೂರು ದಿನಗಳಿಂದ ನಿರಂತರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಇದರಿಂದಾಗಿ ಸಚಿವ ಡಿಕೆಶಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ವಿಚಾರ ತಿಳಿದು ಬಂದಿದೆ.
ಡಿಕೆಶಿಯವರ ಬೆಂಗಳೂರಿನ ಸದಾಸಿವನಗರದಲ್ಲಿರುವ ಮನೆಯಲ್ಲಿ ಬೀಡು ಬಿಟ್ಟಿರುವ ಐಟಿ ಅಧಿಕಾರಿಗಳು ಕಳೆದ 3 ದಿನಗಳ ನಿರಂತರ ವಿಚಾರಣೆ ನಡೆಸುತ್ತಿದ್ದಾರೆ. 49 ಗಂಟೆಗಳಿಂದ ನಿರಂತರ ವಿಚಾರಣೆಗೆಯಿಂದ ಇಂಧನ ಸಚಿವ ಡಿಕೆಶಿ ಆರೋಗ್ಯದಲ್ಲಿ ಬದಲಾವಣೆಯಾಗಿದೆ. ಇದರಿಂದಾಗಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.
ಡಿಕೆಶಿ ಆರೋಗ್ಯ ಏರುಪೇರಾಗಿರುವುದನ್ನು ಗಿಸದ ಐಟಿ ಅಧಿಕಾರಿಗಳು ಖಾಸಗಿ ಆಸ್ಪತ್ರೆಯ ವೈದ್ಯರನ್ನು ಕರೆಸಿದ್ದಾರೆ. ಮೂರು ವೈದ್ಯರ ತಂಡ ಡಿಕೆಶಿ ಮನೆಗೆ ದೌಡಾಯಿಸಿರುವುದಾಗಿ ತಿಳಿದು ಬಂದಿದೆ.
