ಆದಾಯ ತೆರಿಗೆ ಇಲಾಖೆ ದಾಳಿ ಸಂದರ್ಭದಲ್ಲಿ ತನ್ನ ತಾಯಿ ಮುಖ್ಯಮಂತ್ರಿಗಳ ಬಗ್ಗೆ ಆಡಿದ ಮಾತುಗಳಿಗೆ ಇಂಧನ ಸಚಿವ  ಡಿ.ಕೆ, ಶಿವಕುಮಾರ್  ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಪುತ್ರಸಹಜ ವಾತ್ಸಲ್ಯದಿಂದಾಗಿ ಮಾನ್ಯ ಮುಖ್ಯಮಂತ್ರಿಗಳ ಬಗ್ಗೆ ಆಡಿದ ಮಾತುಗಳ ಬಗ್ಗೆ ನಾನು ಬಹಿರಂಗವಾಗಿ ಕ್ಷಮೆ ಯಾಚಿಸುತ್ತೇನೆ ಎಂದು ಡಿಕೆಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ಸಂದರ್ಭದಲ್ಲಿ ತನ್ನ ತಾಯಿ ಮುಖ್ಯಮಂತ್ರಿಗಳ ಬಗ್ಗೆ ಆಡಿದ ಮಾತುಗಳಿಗೆ ಇಂಧನ ಸಚಿವ ಡಿ.ಕೆ, ಶಿವಕುಮಾರ್ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

ಪುತ್ರಸಹಜ ವಾತ್ಸಲ್ಯದಿಂದಾಗಿ ಮಾನ್ಯ ಮುಖ್ಯಮಂತ್ರಿಗಳ ಬಗ್ಗೆ ಆಡಿದ ಮಾತುಗಳ ಬಗ್ಗೆ ನಾನು ಬಹಿರಂಗವಾಗಿ ಕ್ಷಮೆ ಯಾಚಿಸುತ್ತೇನೆ ಎಂದು ಡಿಕೆಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒತ್ತಡಕ್ಕೊಳಗಾಗಿದ್ದ ಸಂದರ್ಭದಲ್ಲಿ ತಾಯಿಯ ಮುಗ್ಧತೆಯನ್ನು ದುರುಪಯೋಗಪಡಿಸಿಕೊಂಡು ಮಾಧ್ಯಮಗಳು, ಮುಖ್ಯಮಂತ್ರಿ ಬಗ್ಗೆ ಹೇಳಿಕೆ ನೀಡುವಂತೆ ಪ್ರಚೋದಿಸಿದೆ, ಎಂದು ಅವರು ಹೇಳಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳು ಎಂದಿಂದಿಗೂ ನನಗೆ ಬೆಂಬಲವಾಗಿ ನಿಂತಿದ್ದಾರೆ. ನಾನು ನನ್ನ ತಾಯಿಯ ಉದ್ದೇಶಪೂರ್ವಕವಲ್ಲದ ಹೇಳಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಕ್ಷಮೆ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.