ಡಿಕೆಸು ಆಪ್ತ ಹೈ ಕೋರ್ಟ್ ಮೊರೆ

First Published 4, Jul 2018, 7:24 AM IST
DK Suresh Close Aid Go's To High Court
Highlights

ಅಮಾನ್ಯಗೊಂಡ ನೋಟುಗಳ ಅಕ್ರಮ ವಿನಿಮಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸಂಸದ ಡಿ.ಕೆ.ಸುರೇಶ್‌ ಅವರ ಮಾಜಿ ಆಪ್ತ ಸಹಾಯಕ ಬಿ.ಪದ್ಮನಾಭಯ್ಯ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಬೆಂಗಳೂರು :  ಅಮಾನ್ಯಗೊಂಡ ನೋಟುಗಳ ಅಕ್ರಮ ವಿನಿಮಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸಂಸದ ಡಿ.ಕೆ.ಸುರೇಶ್‌ ಅವರ ಮಾಜಿ ಆಪ್ತ ಸಹಾಯಕ ಬಿ.ಪದ್ಮನಾಭಯ್ಯ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಸುಮಾರು 10 ಲಕ್ಷ ರು. ಮೌಲ್ಯದ ಅಮಾನ್ಯಗೊಂಡ 500 ಮತ್ತು 1000 ರು. ಮುಖಬೆಲೆಯ ನೋಟುಗಳನ್ನು ಅಕ್ರಮವಾಗಿ ಬದಲಿಸಲು ಪ್ರಯತ್ನಿಸಿದ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಪದ್ಮನಾಭಯ್ಯ ಅವರಿಗೆ ಈಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ನಿರಾಕರಿಸಿತ್ತು.

ಇದರಿಂದ ಪದ್ಮನಾಭಯ್ಯ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಅರ್ಜಿಯು ಶೀಘ್ರ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರಲಿದೆ.

loader