ಇಂಧನ ಸಚಿವ ಡಿ. ಕೆ. ಶಿವಕುಮಾರ್ ಪ್ರತಿನಿಧಿಸುವ ಕನಕಪುರ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿ ಯನ್ನು ಕಣಕ್ಕೆ ಇಳಿಸಲು ಜೆಡಿಎಸ್ ನಿರ್ಧರಿಸುತ್ತಿದ್ದಂತೆಯೇ ಚನ್ನಪಟ್ಟಣದ ಕಣ ಪ್ರವೇಶಿಸಲು ಸಂಸದ ಡಿ.ಕೆ.ಸುರೇಶ್ ಸಜ್ಜಾಗಿದ್ದಾರೆ.
ಬೆಂಗಳೂರು: ಇಂಧನ ಸಚಿವ ಡಿ. ಕೆ. ಶಿವಕುಮಾರ್ ಪ್ರತಿನಿಧಿಸುವ ಕನಕಪುರ ಕ್ಷೇತ್ರಕ್ಕೆ ಪ್ರಬಲ ಅಭ್ಯರ್ಥಿ ಯನ್ನು ಕಣಕ್ಕೆ ಇಳಿಸಲು ಜೆಡಿಎಸ್ ನಿರ್ಧರಿಸುತ್ತಿದ್ದಂತೆಯೇ ಚನ್ನಪಟ್ಟಣದ ಕಣ ಪ್ರವೇಶಿಸಲು ಸಂಸದ ಡಿ.ಕೆ.ಸುರೇಶ್ ಸಜ್ಜಾಗಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಕೈ ಕೊಟ್ಟ ಸಿ.ಪಿ. ಯೋಗೇಶ್ವರ್ ಬಿಜೆಪಿ ಸೇರುತ್ತಿದ್ದಂತೆಯೇ ಅವರನ್ನು ಮಣಿಸಲು ಹಳೆಯ ಶತ್ರುಗಳಾದ ಶಿವಕುಮಾರ್ ಹಾಗೂ ಜೆಡಿಎಸ್‌ನ ಕುಮಾರಸ್ವಾಮಿ ಹತ್ತಿರವಾಗಿದ್ದರು.
ಮಂಡ್ಯ ಜಿಲ್ಲೆಯಿಂದ ಅಸೆಂಬ್ಲಿಗೆ ರಮ್ಯಾ ಸ್ಪರ್ಧೆ?
ಈ ಬಗ್ಗೆ ಅವರ ನಡುವೆ ಮಾತುಕತೆಯೂ ನಡೆದಿತ್ತು. ಅದರ ಪ್ರಕಾರ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ, ಯೋಗೇಶ್ವರ್ ಬೆಂಬಲಿಗರೊಬ್ಬರನ್ನು ಕಾಂಗ್ರೆಸ್‌ಗೆ ಸೆಳೆದು ಅವರಿಗೆ ಟಿಕೆಟ್ ನೀಡುವ ಮೂಲಕ ಜೆಡಿಎಸ್‌ಗೆ ಕಾಂಗ್ರೆಸ್ ಸಹಕರಿಸಲು ಮತ್ತು ಅದಕ್ಕೆ ಪರ್ಯಾಯವಾಗಿ ಕನಕಪುರ ಸೇರಿದಂತೆ ಕೆಲ ಕ್ಷೇತ್ರಗಳಲ್ಲಿ ದುರ್ಬಲ ಅಭ್ಯರ್ಥಿ ಕಣಕ್ಕಿಳಿಸುವ ಮೂಲಕ ಸಹಕರಿಸಬೇಕು ಎಂಬುದು ಮಾತುಕತೆಯ ತಿರುಳು.
ಆದರೆ, ಇದಕ್ಕೆ ಜೆಡಿಎಸ್ ಸೊಪ್ಪು ಹಾಕಿದಂತೆ ಕಂಡು ಬಂದಿಲ್ಲ. ಹೀಗಾಗಿ ಡಿ.ಕೆ. ಸುರೇಶ್ ಅವರು ಚನ್ನಪಟ್ಟಣ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆ ನಡೆಸಲು ಸಜ್ಜಾಗಿದ್ದಾರೆ ಎಂದು ಮೂಲಗಳು ಹೇಳುತ್ತವೆ.
