ರಿಯಲ್ ಎಸ್ಟೇಟ್ ಉದ್ಯಮಿ ಮತ್ತು  ಸಚಿವ ಡಿ.ಕೆ. ಶಿವಕುಮಾರ್ ಕಟ್ಟ ಬೆಂಬಲಿಗ. ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ಉತ್ತರಹಳ್ಳಿ ವಾರ್ಡ್​ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಬೆಂಗಳೂರು(ಆ.27): ಇಂಧನ ಸಚಿವ ಡಿ.ಕೆ. ಶಿವಕುಮಾರ್ ಆಪ್ತ ಹಾಗೂ ಕಾಂಗ್ರೆಸ್ ಮುಖಂಡ ವರಪ್ರಸಾದ್ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.‌ ಸದಾನಂದ ಗೌಡ ಸಹಭಾಗಿತ್ವದಲ್ಲಿ ಬಿಜೆಪಿ ಸೇರಿದರು.

ವರಪ್ರಸಾದ್ ರೆಡ್ಡಿ, ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಸಚಿವ ಡಿ.ಕೆ. ಶಿವಕುಮಾರ್ ಕಟ್ಟ ಬೆಂಬಲಿಗ. ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ಉತ್ತರಹಳ್ಳಿ ವಾರ್ಡ್​ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಅಲ್ಲದೆ ಇದೇ ಸಮಯದಲ್ಲಿ ರೆಡ್ಡಿ ನಿವಾಸ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆದು, ಮನೆಯಲ್ಲಿ 6 ಕೋಟಿ ರೂ. ರೂಪಾಯಿ ಪತ್ತೆಯಾಗಿತ್ತು.

ಬೆಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು 'ನಾನು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರಿದ್ದೇನೆ. ನಾನು ನರೇಂದ್ರ ಮೋದಿಯವರ ಕೆಲಸ ಮೆಚ್ಚಿ ಪಕ್ಷಕ್ಕೆ ಬಂದಿದ್ದೇನೆ. ನನ್ನ ಮನೆ ಮೇಲೆ ಐಟಿ ದಾಳಿಯಾಗಿಲ್ಲ.ನಾನು ಬಾಡಿಗೆ ನೀಡಿದ್ದ ಕಟ್ಟಡದ ಮೇಲೆ ದಾಳಿಯಾಗಿತ್ತು' ಎಂದು ತಿಳಿಸಿದ್ದಾರೆ.