ಸಚಿವ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದವರು ಶನಿವಾರ ರಾತ್ರಿ ಕುಂದಾಪುರದ ಖಾಸಗಿ ಐಷಾರಾಮಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ.
ಕುಂದಾಪುರ(ಜ.07): ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಶನಿವಾರ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಶತಚಂಡಿಕಾಯಾಗಕ್ಕೆ ಸಂಕಲ್ಪ ಪೂಜೆ ನೆರವೇರಿಸಿದ್ದು, ಸೋಮವಾರ ಬೆಳಗ್ಗೆ ಈ ಯಾಗದ ಪೂರ್ಣಾಹುತಿ ನಡೆಯಲಿದೆ.
ಸಚಿವ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದವರು ಶನಿವಾರ ರಾತ್ರಿ ಕುಂದಾಪುರದ ಖಾಸಗಿ ಐಷಾರಾಮಿ ಹೋಟೆಲ್ನಲ್ಲಿ ಉಳಿದುಕೊಂಡಿದ್ದಾರೆ. ಭಾನುವಾರವೂ ಇಲ್ಲೇ ಕಳೆದು, ಸೋಮವಾರ ಬೆಳಗ್ಗೆ ಮತ್ತೆ ಕೊಲ್ಲೂರಿಗೆ ಭೇಟಿ ನೀಡಿ ಶತಚಂಡಿಕಾಯಾಗದ ಪೂರ್ಣಾಹುತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೈಂದೂರಿನಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ದರಾಮಯಯ್ಯ ಅವರ ಸಾಧನಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಕೂಡಾ ಭಾನುವಾರ ಕೊಲ್ಲೂರಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
