ತಮಿಳುನಾಡು ಡಿಎಂಕೆ ಮುಖಂಡ ಕರುಣಾನಿಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಣಾನಿಧಿ ಶೀತ ಹಾಗೂ ಅಜೀರ್ಣ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಡಿಸೆಂಬರ್ 7ರಂದು ಕೂಡ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಮತ್ತೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚೆನ್ನೈ(ಡಿ.16): ತಮಿಳುನಾಡು ಡಿಎಂಕೆ ಮುಖಂಡ ಕರುಣಾನಿಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕರುಣಾನಿಧಿ ಶೀತ ಹಾಗೂ ಅಜೀರ್ಣ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಡಿಸೆಂಬರ್ 7ರಂದು ಕೂಡ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಮತ್ತೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ವಿಚಾರ ತಿಳಿದ ಕೂಡಲೇ ಆಸ್ಪತ್ರೆಗೆ ಪುತ್ರ ಸ್ಟಾಲೀನ್ ಸೇರಿದಂತೆ ಡಿಎಂಕೆ ಮುಖಂಡರು ದೌಡಾಯಿಸಿ ಕರುಣಾನಿಧಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.
