ನಗರದ ಡಾ.ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿ-ನೋಟಿಫಿಕೇಷನ್ ಮಾಡಲು 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ. ಎಸ್.ಯಡಿಯೂರಪ್ಪ ‘ಭೂ ಮಾಲೀಕರಿಂದ ಅರ್ಜಿಗಳನ್ನು ನೇರವಾಗಿ ಸ್ವೀಕರಿಸಿ, ಆದೇಶಗಳನ್ನು ಹೊರಡಿಸಿದ್ದರು.
ಬೆಂಗಳೂರು(ಆ.29): ನಗರದ ಡಾ.ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿ-ನೋಟಿಫಿಕೇಷನ್ ಮಾಡಲು 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ. ಎಸ್.ಯಡಿಯೂರಪ್ಪ ‘ಭೂ ಮಾಲೀಕರಿಂದ ಅರ್ಜಿಗಳನ್ನು ನೇರವಾಗಿ ಸ್ವೀಕರಿಸಿ, ಆದೇಶಗಳನ್ನು ಹೊರಡಿಸಿದ್ದರು.
ನಂತರ ಮುಖ್ಯಮಂತ್ರಿಯಾದ ಡಿ.ವಿ. ಸದಾನಂದ ಗೌಡ ಅವರು 2012ರಲ್ಲಿ ವಿಧಾನಮಂಡಲದ ಅಧಿವೇಶನದ ವೇಳೆ ಶಿವರಾಮ ಕಾರಂತ ಬಡಾವಣೆ ಜಮೀನು ಡಿನೋಫಿಕೇಷನ್ ಕುರಿತು ಸಿಐಡಿ ತನಿಖೆ ನಡೆಸಲು ಆದೇಶಿಸುವುದಾಗಿ ಸದನಕ್ಕೆ ಭರವಸೆ ನೀಡಿದ್ದರು ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಹೈಕೋರ್ಟ್ ಗಮನಕ್ಕೆ ತಂದಿದೆ.
ಕಾರಂತ ಬಡಾವಣೆ ಡಿ-ನೋಟಿಫಿಕೇಷನ್ ಪ್ರಕರಣ ಸಂಬಂಧ ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎರಡು ಎಫ್'ಐಆರ್‌ಗಳ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗಳ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠಕ್ಕೆ ಎಸಿಬಿ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಹೀಗೆ ತಿಳಿಸಿದರು. ಈ ವಾದ ಆಲಿಸಿದ ನ್ಯಾಯಪೀಠವು ಆ.೩೦ಕ್ಕೆ ಅರ್ಜಿ ವಿಚಾರಣೆ ಮುಂದೂಡಿತು.
