ಜೆಡಿಎಸ್‌ನಿಂದ ಅಮಾನತಾದ ಶಾಸಕರು ಮರಳಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರಂತೆ ಕೆಲಸ ಮಾಡುವ ಇಚ್ಛೆ ಹೊಂದಿದ್ದವರಿಗೆ ಮುಕ್ತ ಆಹ್ವಾನವಿದೆ. ಜೆಡಿಎಸ್‌ ಶಾಸಕ ಜಮೀರ್‌ ಅಹ್ಮದ್‌ ದಿನಕ್ಕೊಂದು, ಗಳಿಗೆಗೊಂದು ಹೇಳಿಕೆ ನೀಡುತ್ತಿದ್ದು, ಅವರ ಮೇಲೆ ಭರವಸೆ ಇಡುವುದು ಹೇಗೆ?ದೇವೇಗೌಡ ಜೆಡಿಎಸ್‌ ರಾಷ್ಟ್ರಾಧ್ಯಕ್ಷ
ಬೆಂಗಳೂರು: ಪಕ್ಷದ ಬಂಡಾಯ ಶಾಸಕ ಜಮೀರ್ ಅಹಮದ್ ಅವರ ಸಹವಾಸವೇ ನಮಗೆ ಬೇಡ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಖಡಕ್ ಆಗಿ ಹೇಳಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮೊಂದಿಗೆ ಜಮೀರ್ ಅಹಮದ್ ಮಾತುಕತೆಗೆ ಬರುವುದು ಬೇಡ. ಅವರನ್ನು ನಾವು ಕರೆಯುವುದೂ ಬೇಕಿಲ್ಲ. ಅವರ ಸಹವಾಸವೇ ನಮಗೆ ಬೇಡ. ಜಮೀರ್ ಯಾರು ಎಂಬುದು ಜನತೆಗೆ ಗೊತ್ತಿದೆ ಎಂದು ತೀಕ್ಷ್ಣವಾಗಿ ತಿಳಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಚನ್ನಪಟ್ಟಣ ಕ್ಷೇತ್ರದಿಂದ ಈ ಹಿಂದೆ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಮುಂದಿನ ಚುನಾವಣೆಯಲ್ಲಿಯೂ ಅವರು ಆ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು ಎಂಬುದು ಜನರ ಆಶಯ. ಈ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು. ಇದೇ ವೇಳೆ, ನಾಗಮಂಗಲಕ್ಕೆ ಅಭ್ಯರ್ಥಿ ಅಂತಿಮವಾಗಿಲ್ಲ ಎಂದೂ ಹೇಳಿದರು.
