ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಬಿಜೆಪಿಯವರು ಬದಲಾಯಿಸಲು ಮುಂದಾದರೆ ದೊಡ್ಡಕ್ರಾಂತಿಯೇ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಮೈಸೂರು: ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಬಿಜೆಪಿಯವರು ಬದಲಾಯಿಸಲು ಮುಂದಾದರೆ ದೊಡ್ಡಕ್ರಾಂತಿಯೇ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಸಂವಿಧಾನದಲ್ಲಿ ಜಾತ್ಯತೀತ ಆಶಯಗಳಿಗೆ ಮಹತ್ವ ನೀಡಲಾಗಿದೆ. ಎಲ್ಲರಿಗೂ ಸಮಾನತೆ ಕಲ್ಪಿಸಿರುವ ಸಂವಿಧಾನ ಬದಲಾವಣೆ ಅಸಾಧ್ಯದ ಮಾತು. ಹಾಗೊಂದು ವೇಳೆ ಬದಲಾಯಿಸಿದರೆ ಕಾಂಗ್ರೆಸ್ ಕೈಕಟ್ಟಿ ಕೂರುವುದಿಲ್ಲ. ಶೋಷಣೆ ಯನ್ನು ನಾವು ಸಹಿಸುವುದಿಲ್ಲ. ಅನಾದಿ ಕಾಲದಿಂದಲೂ ಶೋಷಿತರು, ಅಲ್ಪಸಂಖ್ಯಾತರಿಗೆ ಶಿಕ್ಷಣವನ್ನು ವಂಚಿಸಲಾಯಿತು. ಇದನ್ನು ಅರ್ಥ ಮಾಡಿಕೊಂಡು ಅಲ್ಪಸಂಖ್ಯಾತರು ಬಿಜೆಪಿಗೆ ಯಾವುದೇ ಕಾರಣಕ್ಕೂ ಮತ ನೀಡಬಾರದು ಎಂದು ಮನವಿ ಮಾಡಿದರು.
ಭಾರತ ಉಳಿಯಲು ಕಾಂಗ್ರೆಸ್ ಪಕ್ಷ ತ್ಯಾಗ, ಬಲಿದಾನ ಮಾಡಿದೆ. ಒಂದು ವೇಳೆ 1947ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಭಾರತ ದೇಶ ಏನಾಗುತ್ತಿತ್ತು ಎಂಬುದನ್ನು ಅಲ್ಪಸಂಖ್ಯಾತರು ಗಂಭೀರವಾಗಿ ಆಲೋಚಿಸಬೇಕು ಎಂದರು.
