ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಲವರು ನಿದ್ದೆರಾಮಯ್ಯ ಎಂದು ಟೀಕಿಸುವುದು ಸರಿಯಲ್ಲ’ ಎಂದು ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮಿಗಳು ಹೇಳಿದರು.

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಲವರು ನಿದ್ದೆರಾಮಯ್ಯ ಎಂದು ಟೀಕಿಸುವುದು ಸರಿಯಲ್ಲ’ ಎಂದು ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮಿಗಳು ಹೇಳಿದರು.

ಇಲ್ಲಿನ ಕೆ.ಆರ್. ಪುರದಲ್ಲಿ ಕನಕ ಜಯಂತಿಯಲ್ಲಿ ಮಾತನಾಡಿದ ಅವರು ‘ನಿದ್ದೆಯಲ್ಲಿದ್ದ ಶೋಷಿತ ಸಮುದಾಯಗಳನ್ನು ಎಚ್ಚರಿಸಿ ಅವರಿಗಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಸಿದ್ದರಾಮಯ್ಯ ಹಾಲುಮತದಲ್ಲಿ ಹುಟ್ಟಿರುವುದು ನಮ್ಮ ಸೌಭಾಗ್ಯವಾಗಿದೆ. ಸಿದ್ದರಾಮಯ್ಯರಿಗೆ ಆರೋಗ್ಯ ಸಮಸ್ಯೆಯಿರುವುದರಿಂದ ಆಯಾಸವಾದಾಗ ನಿದ್ದೆ ಮಾಡುತ್ತಾರೆ. ಅದನ್ನೇ ಕೆಟ್ಟದಾಗಿ ಬಿಂಬಿಸುವುದು ಸರಿಯಲ್ಲ’ ಎಂದರು.