ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಪರಮೇಶ್ವರ್ ಸೋಲಿಸಲು ಈಗಾಗಲೇ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಹೀಗಂತ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರು (ಅ.07): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಪರಮೇಶ್ವರ್ ಸೋಲಿಸಲು ಈಗಾಗಲೇ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಹೀಗಂತ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ಪರಮೇಶ್ವರ್ ಸೋಲಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎನ್ನುವ ಮೂಲಕ ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ನಡುವಿನ ಭಿನ್ನಮತದ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ.
