ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈಗೆ  ಪ್ರತಿಷ್ಠಿತ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಘೋಷಿಸಲಾಗಿದ್ದು, ನಾಳೆ ಪ್ರಶಸ್ತಿ ಪ್ರಧಾನ ಸಮಾರಂಭ ಇದೆ.  ಇದು ಭಾರೀ ವಿವಾದಕ್ಕೀಡಾಗಿದೆ.

ಬೆಂಗಳೂರು (ಅ.09): ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈಗೆ ಪ್ರತಿಷ್ಠಿತ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಘೋಷಿಸಲಾಗಿದ್ದು, ನಾಳೆ ಪ್ರಶಸ್ತಿ ಪ್ರಧಾನ ಸಮಾರಂಭ ಇದೆ. ಇದು ಭಾರೀ ವಿವಾದಕ್ಕೀಡಾಗಿದೆ.

ಬಿಜೆಪಿ ಆಡಳಿತ ಇರುವ ಕೋಟತಟ್ಟು ಗ್ರಾಮ ಪಂಚಾಯತ್ ಈ ಪ್ರಶಸ್ತಿಗೆ ರೈ ಅವರನ್ನು ಆಯ್ಕೆ ಮಾಡಿತ್ತು. ಆದರೆ ಇತ್ತೀಚೆಗೆ ಪ್ರಧಾನಿ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಬಗ್ಗೆ ಪ್ರಕಾಶ್ ರೈ ಆಡಿದ ಮಾತಿಗೆ ಬಿಜೆಪಿ ಕೆರಳಿ ಕೆಂಡವಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ರೈ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆದರೆ ನಾಳಿನ ಸಮಾರಂಭಕ್ಕೆ ಹಾಜರಾಗಿಯೇ ತೀರುತ್ತೇನೆ ಎಂದು ಹೇಳಿದ್ದಾರೆ.