ವಾಷಿಂಗ್ಟನ್(ಸೆ.14): ಮಹತ್ವದ ಬೆಳವಣಿಗೆಯೊಂದರಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ, ಹತ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ಹತನಾಗಿದ್ದಾನೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. 

ಬರೋಬ್ಬರಿ10 ಲಕ್ಷ ಯುಸ್ ಡಾಲರ್(7 ಕೋಟಿ ರೂ.) ಇನಾಮು ಹೊಂದಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಮ್ಜಾ ಬಿನ್ ಲಾಡೆನ್’ನನ್ನು ಹೊಡೆದುರುಳಿಸಲಾಗಿದೆ ಎಂದು ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ.

ಆಗಸ್ಟ್ ಮೊದಲ ವಾರದಲ್ಲೇ ಹಮ್ಜಾ ಬಿನ್ ನನ್ನು ಹತ್ಯೆ ಮಾಡಲಾಗಿದೆ ಎಂದ ಯುಎಸ್ ಗುಪ್ತಚರ ಸಂಸ್ಥೆಗಳು ವರದಿ ಮಾಡಿದ್ದವು. ಇದೀಗ ಟ್ರಂಪ್ ಅಧಿಕೃತ ಘೋಷಣೆ ಮಾಡುವ ಮೂಲಕ ಈ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.  

ಹಮ್ಜಾ ಬಿನ್ ತನ್ನ ತಂದೆ ಒಸಾಮಾ ಬಿನ್ ಲಾಡೆನ್ ಹಾಗೂ ಸಹೋದರ ಖಾಲಿದ್ ಬಿನ್ ಲಾಡೆನ್ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಘೋಷಿಸಿದ್ದ.