ರಷ್ಯಾ ಮೇಲೆ ನಿರ್ಬಂಧ ಹೇರುವ ಮಸೂದೆಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಸಹಿ ಹಾಕಿದ್ದಾರೆ. ಕಳೆದ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ನಡೆಸಿದೆ ಹಾಗೂ  ಅಂತರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸುತ್ತಾ ಬಂದಿದೆ ಎಂಬ ಹಿನ್ನೆಲೆಯಲ್ಲಿ ರಷ್ಯಾಗೆ ನಿರ್ಬಂಧ ಹೇರುವ ನಿರ್ಧಾರವನ್ನು ಅಮೆರಿಕಾ ಕಾಂಗ್ರೆಸ್ ಬಹುಮತದಿಂದ ಅಂಗೀಕರಿಸಿತ್ತು.

ವಾಷಿಂಗ್ಟನ್: ರಷ್ಯಾ ಮೇಲೆ ನಿರ್ಬಂಧ ಹೇರುವ ಮಸೂದೆಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಸಹಿ ಹಾಕಿದ್ದಾರೆ.

ಕಳೆದ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ನಡೆಸಿದೆ ಹಾಗೂ ಅಂತರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸುತ್ತಾ ಬಂದಿದೆ ಎಂಬ ಹಿನ್ನೆಲೆಯಲ್ಲಿ ರಷ್ಯಾಗೆ ನಿರ್ಬಂಧ ಹೇರುವ ನಿರ್ಧಾರವನ್ನು ಅಮೆರಿಕಾ ಕಾಂಗ್ರೆಸ್ ಬಹುಮತದಿಂದ ಅಂಗೀಕರಿಸಿತ್ತು.

ರಷ್ಯಾ ಜೊತೆ ಉತ್ತಮ ಬಾಂಧವ್ಯ ಹೊಂದುವ ಇಂಗಿತವನ್ನು ಈ ಮುಂಚೆ ವ್ಯಕ್ತಪಡಿಸಿದ್ದ ಟ್ರಂಪ್, ಕಾಂಗ್ರೆಸ್ ಅಂಗೀಕರಿಸಿರುವ ಮಸೂದೆಗೆ ಸಹಿ ಹಾಕಿದ್ದಾರೆ,

ರಷ್ಯಾ ಜತೆ ಇರಾನ್ ಹಾಗೂ ಉತ್ತರ ಕೊರಿಯಾಗಳ ಮೇಲೂ ನಿರ್ಬಂಧ ಹೇರಲಾಗಿದೆ.