ಬೆಂಗಳೂರು(ಸೆ.12): ಸಿಎಂ ಜೊತೆ ನಾವಿದ್ದೇವೆ,ತಮಿಳುನಾಡಿಗೆ ಒಂದು ಹನಿ ನೀರು ಬಿಡುವುದು ಬೇಡ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ ಉಂಟಾದ ಕುರಿತು ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ಒಂದು ಹನಿ ನೀರನ್ನೂ ತಮಿಳುನಾಡಿಗೆ ಬಿಡುವ ಅಗತ್ಯವಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಜೊತೆ ನಾವಿದ್ದೀವಿ ದಯವಿಟ್ಟು ನೀರು ಬಿಡಬೇಡಿ. ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ ಎಂದು ಸೂಚನೆ ನೀಡಿದರು.

ಅಲ್ಲದೆ ಈ ವಿಚಾರದಲ್ಲಿ ಕರ್ನಾಟಕದ ಜನತೆಯನ್ನು ಕೆರಳಿಸುತ್ತಿದ್ದಾರೆ. ಹೀಗೆ ಕರ್ನಾಟಕದ ಜನರನ್ನು ಕೆರಳಿಸುವುದು ಬೇಡ ಎಂದು ಕುಮಾರಸ್ವಾಮಿ ಆಗ್ರಹಿಸಿದರು.