ಕಾಂಗ್ರೆಸ್ ಪಕ್ಷವು ಇವತ್ತಿನ ಒಳಗೆ ಮೈತ್ರಿ ಬಗ್ಗೆ ಅಧಿಕೃತವಾಗಿ ಘೋಷಿಸದಿದ್ದರೆ ಮುಂಬರಲಿರುವ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಲಕ್ನೋ (ಜ.20): ಕಾಂಗ್ರೆಸ್ ಪಕ್ಷವು ಇವತ್ತಿನ ಒಳಗೆ ಮೈತ್ರಿ ಬಗ್ಗೆ ಅಧಿಕೃತವಾಗಿ ಘೋಷಿಸದಿದ್ದರೆ ಮುಂಬರಲಿರುವ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ಪಕ್ಷದ ಮೂಲಗಳು ಹೇಳಿವೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಕಾಂಗ್ರೆಸ್ ಪಕ್ಷವು ಮೈತ್ರಿ ನಿಲುವನ್ನು ಘೋಷಿಸಲು ನಿರಂತರವಾಗಿ ತಡಮಾಡುತ್ತಿರುವುದರಿಂದ ಸಮಾಜವಾದಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಮಹಾ ಮೈತ್ರಿಯಾದರೆ 403 ವಿಧಾನ ಸಭಾ ಕ್ಷೇತ್ರಗಳಲ್ಲಿ 80-85 ಸ್ಥಾನಗಳನ್ನು ಕಾಂಗ್ರೆಸ್ ಗೆ ಬಿಟ್ಟುಕೊಡುವುದಾಗಿ ಅಖಿಲೇಶ್ ಯಾದವ್ ಆಫರ್ ಮಾಡಿದ್ದರು. ಆದರೆ ಮೈತ್ರಿ ಬಗ್ಗೆ ಕಾಂಗ್ರೆಸ್ ಇನ್ನು ಮಗುಮ್ಮಾಗಿಯೇ ಉಳಿದಿದೆ. 

ಈಗಾಗಲೇ ಸಮಾಜವಾದಿ ಪಕ್ಷ ಮೊದಲ 3 ನೇ ಹಂತದ 191 ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶಿವಪಾಲ್ ಯಾದವ್ ಜಸವಂತ್ ನಗರ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.