ಇತ್ತೀಚಿಗೆ ನಡೆದ ಡ್ರಾಮಾ ಜೂನಿಯರ್ಸ್-2 ರಿಯಾಲಿಟಿ ಶೋ'ನಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವ ರೀತಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಿದೆ.

ಉಡುಪಿ(ಆ.09): ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ ಡ್ರಾಮಾ ಜೂನಿಯರ್ಸ್-2 ವಿರುದ್ಧ ಬ್ರಾಹ್ಮಣ ಸಮುದಾಯ ಸಿಡಿದೆದ್ದಿದೆ.

ಇತ್ತೀಚಿಗೆ ನಡೆದ ಡ್ರಾಮಾ ಜೂನಿಯರ್ಸ್-2 ರಿಯಾಲಿಟಿ ಶೋ'ನಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವ ರೀತಿಯಲ್ಲಿ ಕಾರ್ಯಕ್ರಮ ಪ್ರಸಾರವಾದ ಹಿನ್ನಲೆಯಲ್ಲಿ ಉಡುಪಿ ಪೇಜಾವರ ಮಠದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಯುವ ಬ್ರಾಹ್ಮಣ ಪರಿಷತ್ ನೇತೃತ್ವದಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪೇಜಾವರ ವಿಶ್ವಪ್ರಸನ್ನ ತೀರ್ಥಶ್ರೀ, 'ಬ್ರಾಹ್ಮಣ ವೃತ್ತಿಗೆ ಅವಹೇಳನವಾಗಿದೆ. ಇದು ನಮಗೆ ದುಃಖ ಉಂಟು ಮಾಡಿದೆ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ. ಸಣ್ಣ ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಭಿತ್ತುವ ಕಾರ್ಯ ಮಾಡದಿರಿ. ಇದನ್ನು ನಾವು ಸರ್ವತಾ ಒಪ್ಪಲು ಸಾಧ್ಯವಿಲ್ಲ. ಮುಂದಿನ ಸಂಚಿಕೆಯಲ್ಲಿ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ತೀವ್ರ ಪ್ರತಿಭಟನೆ ಮಾಡುತ್ತೇವೆ' ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥಶ್ರೀ ಎಚ್ಚರಿಕೆ ನೀಡಿದ್ದಾರೆ.