ಸಚಿವ ಅನಂತ್ ಹೆಗಡೆ ಸಂಪುಟದಿಂದ ಕೈಬಿಡಿ

First Published 1, Feb 2018, 6:31 PM IST
Drop Ananth Kumar Hegde From Cabinet Urge Dalit Groups
Highlights
  • ದಲಿತರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಕೇಂದ್ರ ಸಂಪುಟದಿಂದ ಕೈ ಬಿಡಬೇಕು
  • ನಂತಕುಮಾರ್ ಹೆಗಡೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ದಲಿತರ ಕುರಿತ ಹೇಳಿಕೆಯ ವಿರುದ್ಧ ಕ್ಷಮೆ ಕೋರಬೇಕು

ಬೆಂಗಳೂರು: ದಲಿತರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಕೇಂದ್ರ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ಕನ್ನಡ ಯುವಕ ಸಂಘದ ಕಾರ್ಯಕರ್ತರು ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಶೇಷಾದ್ರಿಪುರದ ಕೃಷ್ಣಾ ಫ್ಲೋರ್ ಮಿಲ್‌ನಿಂದ ಪ್ರಾರಂಭವಾದ ಮೆರವಣಿಗೆ ಶೇಷಾದ್ರಿಪುರದ ರಾಜೀವ್‌ಗಾಂಧಿ ವೃತ್ತದವರೆಗೂ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಪ್ರತಿಭಟನಾಕಾರರು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ವೆಂಕಟರಮಣ, ಸಂವಿಧಾನಕ್ಕೆ ಅಪಮಾನ ಮಾಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಹಾಗೂ ದಲಿತರ ಕುರಿತ ಹೇಳಿಕೆಯ ವಿರುದ್ಧ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಸಂಘದ ಕಾರ್ಯಾಧ್ಯಕ್ಷ ಮುರಳಿ ಮಾತನಾಡಿ, ಅನಂತಕುಮಾರ್ ಹೆಗಡೆ ಕ್ಷಮೆ ಕೇಳದಿದ್ದಲ್ಲಿ ಮುಂದಿನ ದಿನದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

 

loader