ಬೆಂಗಳೂರು(ಸೆ.25): ನಗರ ವ್ಯಾಪ್ತಿಯಲ್ಲಿ ನಿತ್ಯ 80 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚರಿಸುವ ಕಾರಣ ರಸ್ತೆಗುಂಡಿ ಭರ್ತಿಯು ದೊಡ್ಡ ಸವಾಲಾಗಿದೆ ಪರಿಣಮಿಸಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಮಂಗಳವಾರ ತಿಳಿಸಿದೆ.

ಬೆಂಗಳೂರಿನ ರಸ್ತೆಗಳಲ್ಲಿ ಹೊಂಡಗಳಿಂದ ಸಂಭವಿಸುವ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ಇದನ್ನು ಮುಚ್ಚಲು ಬಿಬಿಎಂಪಿ ಕ್ರಮ ಕೈಗೊಂಡರೂ ವಾಹನಗಳ ದಟ್ಟಣೆಯಿಂದಾಗಿ ಹೊಂಡ ಮುಚ್ಚುವ ಕಾರ್ಯ ಸಮರ್ಪಕವಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. ಲಕ್ಷಾಂತರ ವಾಹನಗಳು ಸಂಚರಿಸುವ ರಸ್ತೆಯಲ್ಲಿ ಹೊಂಡಗಳನ್ನು ಮುಚ್ಚುವ ಕೆಲಸ ಮಾಡಿದರೆ ಪರ್ಯಾಯ ರಸ್ತೆಗಳನ್ನು ಸೂಚಿಸುವುದು ಕಷ್ಟವಾಗುತ್ತದೆ. ವಾಹನಗಳಿಂದಾಗಿಯೇ ರಸ್ತೆ ಹೊಂಡಗಳನ್ನು ಮುಚ್ಚು ಕೆಲಸ ಸಾಧ್ಯವಾಗುತ್ತಿಲ್ಲ ಎಂದು ಬಿಬಿಎಂಪಿ ಪರ ವಕೀಲ ತಿಳಿಸಿದ್ದಾರೆ.

ಅನರ್ಹ ಶಾಸಕರಿಗೆ ಈಗ ಹೊಸ ಆತಂಕ..!

ರಸ್ತೆ ಗುಂಡಿಗಳನ್ನು ಭರ್ತಿ ಮಾಡುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ಆರೋಪಿಸಿ ಕೋರಮಂಗಲದ ವಿಜಯನ್ ಮೆನನ್ ಸೇರಿದಂತೆ ನಾಲ್ವರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಹಾಗೂ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ಕೆ.ಎನ್.ಪುಟ್ಟೇ ಗೌಡ, ನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತಿರುವ ಕಾರಣ ರಸ್ತೆ ಗುಂಡಿ ಭರ್ತಿ ಕಾರ್ಯ ಸಹ ದೊಡ್ಡ ಸವಾಲಾಗಿದೆ ಪರಿಣಮಿಸಿದೆ ಎಂದು ತಿಳಿಸಿದರು.

ಸಿಲಿಕಾನ್ ಸಿಟಿಯಲ್ಲಿ ಮಳೆ: ಕುಂದಲಹಳ್ಳಿಯಲ್ಲಿ ಮನೆಗಳು ಜಲಾವೃತ